ಚೆನ್ನೈ: ಎಐಎಡಿಎಂಕೆ ಹಾಗೂ ಬಿಜೆಪಿ (BJP) ಜೊತೆ ಮೈತ್ರಿ ಸಾಧ್ಯತೆಯ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖಸ್ಥ ಹಾಗೂ ನಟ ವಿಜಯ್ (Actor Vijay) ತೆರೆ ಎಳೆದಿದ್ದಾರೆ.
ಆಡಳಿತಾರೂಢ ಡಿಎಂಕೆಯನ್ನು ಅಧಿಕಾರದಿಂದ ಇಳಿಸುವ ಸಲುವಾಗಿ ಬಿಜೆಪಿಯು ವಿಜಯ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನ ನಡೆಸುತ್ತಿದೆ. ಆ ನಿಟ್ಟಿನಲ್ಲಿ ಉಭಯ ಪಕ್ಷಗಳ ನಾಯಕರ ನಡುವೆ ಮಾತುಕತೆಗಳು ನಡೆಯುತ್ತಿವೆ’ ಎಂಬ ವದಂತಿಗಳು ಹರಿದಾಡಿದ್ದವು. ಆದರೆ, ಟಿವಿಕೆ ಪಕ್ಷದ ಮುಖ್ಯಸ್ಥ, ನಟ ವಿಜಯ್ ಇದನ್ನು ಅಲ್ಲಗಳೆದಿದ್ದಾರೆ. ಇದನ್ನೂ ಓದಿ: ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್
ಪಕ್ಷದ ವತಿಯಿಂದ ಮಾಮಲ್ಲಪುರಂನ ಪಂಚತಾರಾ ಹೋಟೆಲ್‌ನಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ವಿಜಯ್ ಮಾತಾಡಿ, ತಮ್ಮ ಜಾತ್ಯತೀತ ಅಸ್ಮಿತೆಯೊಂದಿಗೆ ಎಂದಿಗೂ ರಾಜೀ ಮಾಡಿಕೊಳ್ಳುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಕಣಕ್ಕಿಳಿಯುತ್ತೇವೆ. ನಮ್ಮ ರಾಜಕೀಯ ಸಿದ್ಧಾಂತವನ್ನ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ ಇರಲಿದೆ ಅಂದಿದ್ದಾರೆ. ಇದನ್ನೂ ಓದಿ: `ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
ತಮ್ಮ ರಾಜಕೀಯ ಸಿದ್ಧಾಂತವನ್ನ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ ಎಂಬುದನ್ನ ಪುನರುಚ್ಚರಿಸಿರುವ ಅವರು, ನಾವು ಪಕ್ಷವನ್ನು ಆರಂಭಿಸಿದ ಹೊಸತರಲ್ಲಿ ನಮ್ಮ ಎದುರಾಳಿಗಳು ನಮ್ಮನ್ನ ಆ ತಂಡದ ಭಾಗವಾಗಿದ್ದೀವಿ. ಈ ತಂಡದ ಭಾಗವಾಗಿದ್ದೀವಿ ಎಂದು ಬ್ರ್ಯಾಂಡ್ ಮಾಡಲು ಪ್ರಯತ್ನಿಸಿದ್ದರು. ಯಾವಾಗ ವಿಜಯ್ ಜೊತೆಗಿರುವ ಜನರ ಬಳಗವನ್ನ ನೋಡಿದರೋ, ಆಗ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು. ಇವರೊಂದಿಗೆ ಕೈಜೋಡಿಸಬಹುದು ಎಂಬಂತಹ ಸುದ್ದಿಗಳನ್ನು ಹರಡಲಾರಂಭಿಸಿದರು ಎಂದು ವ್ಯಂಗ್ಯವಾಡಿದ್ದಾರೆ.
‘ಈ ಸುಳ್ಳು ಸುದ್ದಿಗಳು ನಿಮ್ಮಲ್ಲಿ ಗೊಂದಲ ಮೂಡಿಸಬಹುದು’ ಎಂದು ಜನರನ್ನು ಎಚ್ಚರಿಸಿದ್ದಾರೆ.


