ರಾಹುಲ್‌ ಆರೋಪಿಸಿದಂತೆ ಆನ್‌ಲೈನಿನಲ್ಲಿ ಮತ ಅಳಿಸಲು ಸಾಧ್ಯವಿಲ್ಲ: ಚುನಾವಣಾ ಆಯೋಗ

Public TV
1 Min Read

ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಮಾಡಿರುವ ಆರೋಪಗಳು ತಪ್ಪಾಗಿದ್ದು ಆಧಾರರಹಿತವಾಗಿವೆ ಎಂದು ಚುನಾವಣಾ ಆಯೋಗ (Election Commission)  ಹೇಳಿದೆ.

ರಾಹುಲ್ ಗಾಂಧಿ ಆರೋಪಿಸಿದಂತೆ ಸಾರ್ವಜನಿಕರು ಯಾವುದೇ ಮತವನ್ನು ಆನ್‌ಲೈನ್‌ನಲ್ಲಿ (Online) ಅಳಿಸಲು ಸಾಧ್ಯವಿಲ್ಲ. ವ್ಯಕ್ತಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಲು ಅವಕಾಶ ನೀಡದೆ ಯಾವುದೇ ಅಳಿಸುವಿಕೆ ನಡೆಯುವುದಿಲ್ಲ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತಿಳಿಸಿದೆ.

2023 ರಲ್ಲಿ ಕಲಬುರಗಿ ಜಿಲ್ಲೆಯ ಆಳಂದ್‌ (Aland) ವಿಧಾನಸಭಾ ಕ್ಷೇತ್ರದಲ್ಲಿ ಮತಗಳನ್ನು ಅಳಿಸಲು ಕೆಲವು ವಿಫಲ ಪ್ರಯತ್ನಗಳನ್ನು ಮಾಡಲಾಗಿತ್ತು. ಈ ವಿಷಯದ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗದಿಂದಲೇ ಎಫ್‌ಐಆರ್‌ ದಾಖಲಿಸಲಾಗಿದೆ ಎಂದಿದೆ. ಇದನ್ನೂ ಓದಿ: ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ: ಸುದ್ದಿಗೋಷ್ಠಿಯಲ್ಲಿ ರಾಹುಲ್‌ ಗಾಂಧಿ ಗಂಭೀರ ಆರೋಪ

 

ಈ ಕ್ಷೇತ್ರದಿಂದ 2018 ರಲ್ಲಿ ಬಿಜೆಪಿಯ ಸುಭಾಷ್ ಗುತ್ತೇದಾರ್ ಗೆದ್ದಿದ್ದರೆ 2023 ರಲ್ಲಿ ಕಾಂಗ್ರೆಸ್‌ನ ಬಿ ಆರ್ ಪಾಟೀಲ್ ಗೆದ್ದಿದ್ದರು.

ರಾಹುಲ್‌ ಗಾಂಧಿ ಆರೋಪ ಏನು?
ಕೇಂದ್ರೀಕೃತ ಸಾಫ್ಟ್‌ವೇರ್ ಬಳಸಿ ಕಾಂಗ್ರೆಸ್ ಬೂತ್‌ಗಳಿಂದ ಮತದಾರರನ್ನು ಅಳಿಸುವ ಪ್ರಯತ್ನ ನಡೆದಿತ್ತು. ಆಳಂದದಲ್ಲಿ ಯಾರೋ ಒಬ್ಬರು 6,018 ಮತಗಳನ್ನು ಅಳಿಸಲು ಪ್ರಯತ್ನಿಸಿದ್ದರು. ಆದರೆ ಬೂತ್ ಮಟ್ಟದ ಅಧಿಕಾರಿ ತನ್ನ ಚಿಕ್ಕಪ್ಪನ ಮತ ಅಳಿಸಲ್ಪಟ್ಟಿರುವುದನ್ನು ಗಮನಿಸಿದರು. ಅಷ್ಟೇ ಅಲ್ಲದೇ ಅವರ ನೆರೆ ಹೊರೆಯವರ ಮತಗಳನ್ನು ಅಳಿಸಿರುವುದು ಗೊತ್ತಾಯಿತು. ಈ ಬಗ್ಗೆ ಪ್ರಶ್ನೆ ಮಾಡಿದಾಗ ನಾವು ಯಾರು ಮತಗಳನ್ನು ಡಿಲೀಟ್‌ ಮಾಡಲು ಹೇಳಿಲ್ಲ ಎಂದು ತಿಳಿಸಿದರು. ಹಾಗಾದರೆ ಈ ಮತಗಳ್ಳತನ ಮಾಡಿರುವುದು ಯಾರು ಎಂದು ಪ್ರಶ್ನಿಸಿದರು.

Share This Article