ವಿದ್ಯುತ್ ನಿಗಮಗಳಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನೇರ ನೇಮಕಾತಿ ಇಲ್ಲ: ಸಿಎಂ ಬಿಎಸ್‍ವೈ

Public TV
1 Min Read

ಬೆಂಗಳೂರು: ವಿದ್ಯುತ್ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 2 ಸಾವಿರ ಇಂಜನಿಯರುಗಳ ಭವಿಷ್ಯದ ದೃಷ್ಟಿಯಿಂದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರುಗಳ ಹುದ್ದೆಗೆ ನೇರ ನೇಮಕಾತಿಯನ್ನು ರದ್ದುಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಗರದ ಕರ್ನಾಟಕ ವಿದ್ಯುತ್ ಶಕ್ತಿ ಮಂಡಳಿ ಇಂಜಿನಿಯರುಗಳ ಸಂಘದ ವತಿಯಿಂದ ಆಯೋಜಿಸಲಾದ ಸುವರ್ಣ ಮಹೋತ್ಸವ ಸಂಸ್ಕರಣಾ ಉಪನ್ಯಾಸ ಹಾಗೂ 2020ರ ತಾಂತ್ರಿಕ ದಿನಚರಿ ಮತ್ತು ಕವಿಪ್ರನಿನಿಯ 2020 ರ ಕ್ಯಾಲೆಂಡ್ ಬಿಡುಗಡೆ ಸಮಾರಂಭದಲ್ಲಿ ತಾಂತ್ರಿಕ ದಿನಚರಿ ಹಾಗೂ ಕ್ಯಾಲೆಂಡರ್ ಬಿಡುಗಡೆ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಾತನಾಡಿದರು.

ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 2 ಸಾವಿರ ಇಂಜಿನಿಯರುಗಳ ಭವಿಷ್ಯದ ದೃಷಿಯಿಂದ ಸಹಾಯಕ ಕಾರ್ಯನಿರ್ವಹಕ ಇಂಜಿನಿಯರುಗಳ ಹುದ್ದೆಗೆ ನೇರ ನೇಮಕಾತಿ ಯನ್ನು ರದ್ದುಪಡಿಸಿ, ಸುಮಾರು 9 ರಿಂದ 13 ವರ್ಷಗಳ ಕಾಲ ನಿಗಮದಲ್ಲಿ ಸೇವೆ ಸಲ್ಲಿಸುತ್ತಿರುವ ಸಹಾಯಕ ಇಂಜಿನಿಯರುಗಳಿಗೆ ಪದೊನ್ನತಿ ನೀಡಲು ಮಂಡಳಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಈ ನಿರ್ಧಾರವನ್ನು ಶೀಘ್ರದಲ್ಲೇ ಕಾರ್ಯರೂಪಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದರಿಂದ ರಾಜ್ಯದ ಜನತೆಗೆ ಹಾಗೂ ನಿಗಮಗಳಿಗೆ ಹೆಚ್ಚಿನ ಅನುಕೂಲ ಆಗುವುದರ ಜೊತೆಗೆ ರಾಜ್ಯಾದ್ಯಂತ ಏಕರೂಪದ ಕಾಯಿದೆಯನ್ನು ಕಾನೂನು ಮತ್ತು ನೀತಿ ನಿಯಮಗಳನ್ನು ಜಾರಿಗೊಳಿಸಲು ಸಾಧ್ಯವಾಗುತ್ತದೆ. ಮತ್ತು ರಾಜ್ಯದ ಜನತೆಗೆ ಕಡಿಮೆ ದರದಲ್ಲಿ ವಿದ್ಯುತ್ ವಿತರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಬೇಡಿಕೆಗಳ ಬಗ್ಗೆ ಮುಂದಿನ ಮಂಡಳಿಯ ಸಭೆಯಲ್ಲಿ ಚರ್ಚಿಸಿ ಈಡೇರಿಸುವ ಭರವಸೆ ನೀಡಿದರು.

ಶಿಕ್ಷಣ ತಜ್ಞರಾದ ಡಾ.ಗುರುರಾಜ್ ಕರಜಗಿ ಅವರು ಸುವರ್ಣ ಮಹೋತ್ಸವ ಸಂಸ್ಕರಣಾ ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕಿ, ಡಾ.ಎನ್ ಮಂಜುಳ, ಕರ್ನಾಟಕ ವಿದ್ಯುತ್ ಮಂಡಳಿ ಇಂಜನಿಯರುಗಳ ಸಂಘದ ಅಧ್ಯಕ್ಷರಾದ ಇಂ.ಶಿವಪ್ರಕಾಶ್.ಟಿ.ಎಂ ಸೇರಿದಂತೆ ಹಲವರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *