ಮಾತೃಭಾಷೆಯಲ್ಲಿ ವೃತ್ತಿಪರ ಶಿಕ್ಷಣ ಸಿಗಬೇಕು ಹಾಗಾಗಿ ಹಿಂದಿ ಭಾಷೆಯಲ್ಲಿ ಪ್ರಯತ್ನ: ಧರ್ಮೇಂದ್ರ ಪ್ರಧಾನ್

Public TV
2 Min Read

ಮಂಗಳೂರು: ಭಾರತೀಯ ಐಐಟಿಗಳು (IIT) ವಿಶ್ವಮಟ್ಟದಲ್ಲಿ ಬ್ರ್ಯಾಂಡ್ ಆಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ವಿದೇಶಗಳಲ್ಲಿಯೂ ಸ್ಥಾಪನೆಯಾಗಲಿವೆ. ಹಿಂದಿ (Hindi) ಭಾಷೆಯಲ್ಲಿ ವೈದ್ಯಕೀಯ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮಧ್ಯಪ್ರದೇಶದಲ್ಲಿ ಆರಂಭಿಕ ಪ್ರಯತ್ನಗಳನ್ನು ಮಾಡಲಾಗಿದೆ. ಮಾತೃಭಾಷೆಯಲ್ಲಿ ವೃತ್ತಿಪರ ಶಿಕ್ಷಣ ಲಭಿಸಬೇಕು ಎಂಬುದು ಶಿಕ್ಷಣ ನೀತಿಯ ಸಾರವಾಗಿದೆ ಎಂದು ಕೇಂದ್ರದ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲ ಸಚಿವರಾದ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ತಿಳಿಸಿದರು.

ಸುರತ್ಕಲ್‍ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (NITK) ಕೇಂದ್ರೀಯ ಸಂಶೋಧನಾ ಸೌಲಭ್ಯ (CRF) ಕೇಂದ್ರವನ್ನು ಲೋಕಾರ್ಪಣೆಗೊಳಿಸಿದ ನಂತರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿ ಹೇರಿಕೆಯ ಯಾವ ಉದ್ದೇಶವೂ ಇಲ್ಲ. ಎಲ್ಲ ಭಾಷೆಗಳು ಮುಖ್ಯ. ಎಲ್ಲ ಭಾಷೆಗಳಂತೆ ಹಿಂದಿಯೂ ಒಂದಾಗಿದೆ. ಎಲ್ಲ ರಾಜ್ಯಗಳೂ ಆಯಾ ರಾಜ್ಯದ ಸ್ಥಳೀಯ ಹಾಗೂ ಮಾತೃ ಭಾಷೆಗೆ ಆದ್ಯತೆ ನೀಡಲಿವೆ ಎಂದರು. ಇದನ್ನೂ ಓದಿ: ದೇಶದಲ್ಲಿ ಹಿಂದಿ ಶಿಕ್ಷಣ ಜಾರಿ – ನಾಳೆ 13 ಕಾಲೇಜುಗಳಲ್ಲಿ MBBS ಪಠ್ಯ ರಿಲೀಸ್

ಭಾರತದ ಅಂತಃಸತ್ವವನ್ನು ಹೊಂದಿರುವ ಐಐಟಿ ಮತ್ತು ಐಐಟಿಗಳು ಕೇವಲ ಶಿಕ್ಷಣ ಸಂಸ್ಥೆಗಳಲ್ಲ. ಅವು ಜ್ಞಾನದ ದೇಗುಲಗಳು. ಬರುವ ದಿನಗಳಲ್ಲಿ 10ಕ್ಕೂ ಹೆಚ್ಚಿನ ದೇಶಗಳಲ್ಲಿ ಐಐಟಿಗಳ ಸ್ಥಾಪನೆಯಾಗಲಿವೆ. ಕೇಂದ್ರ ಶಿಕ್ಷಣ ಸಚಿವಾಲಯದ ನೆರವಿನಿಂದ ಹೊರದೇಶಗಳಲ್ಲಿ ಐಐಟಿಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಆ ಪರಿಣಾಮ ಭವಿಷ್ಯದಲ್ಲಿ ಸಾಗರೋತ್ತರ ಐಐಟಿ ಕ್ಯಾಂಪಸ್‍ಗಳು ತಲೆ ಎತ್ತಲಿವೆ ಎಂದು ತಿಳಿಸಿದರು.


ಭವಿಷ್ಯದಲ್ಲಿ ಹೈಡ್ರೋಜನ್ ಸುಸ್ಥಿರ ಇಂಧನ ಮೂಲವಾಗಲಿದೆ. ಉತ್ತಮ ಮಾರುಕಟ್ಟೆಯೂ ಇದೆ. ಉತ್ಪಾದನೆಯಿಂದ ವಿತರಣೆಯವರೆಗೆ ಬಹಳಷ್ಟು ಅವಕಾಶಗಳಿವೆ. ಎನ್ಐಟಿಕೆಯಂತಹ ಸಂಸ್ಥೆಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವುದು ಸಂತಸದ ವಿಚಾರ ಎಂದ ಅವರು ಇಪ್ಪತ್ತೊಂದನೇ ಶತಮಾನದಲ್ಲಿ ಸಾಮರ್ಥ್ಯವರ್ಧನೆಯ ಜೊತೆ ಜಾಗತಿಕ ಸವಾಲುಗಳನ್ನು ಎದುರಿಸಿ ಬೆಳೆಯಲು ಎನ್ಐಟಿಕೆ ಸಮರ್ಥವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಎತ್ತು ಏರಿಗೆಳೀತು ಕೋಣ ನೀರಿಗಿಳೀತು: ಬಿಜೆಪಿ ವ್ಯಂಗ್ಯ

ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ.ಭರತ್ ಶೆಟ್ಟಿ, ವೈ. ಎ. ನಾರಾಯಣ ಸ್ವಾಮಿ, ಎನ್‍ಐಟಿಕೆ ನಿರ್ದೇಶಕ ಪ್ರೊ. ಪ್ರಸಾದ್ ಕೃಷ್ಣ, ಕುಲಸಚಿವ ಪ್ರೊ.ಕೆ.ರವೀಂದ್ರನಾಥ್, ಕೇಂದ್ರೀಯ ಸಂಶೋಧನಾ ಸೌಲಭ್ಯದ ಅಧ್ಯಕ್ಷ ಪ್ರೊ. ಎಂ.ಎನ್. ಸತ್ಯನಾರಾಯಣ ಜೊತೆಗಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *