ಅತ್ಯಾಚಾರ ಆರೋಪಿಗಳಿಗೆ ಸರ್ಕಾರಿ ಉದ್ಯೋಗ ಕಟ್: ಅಶೋಕ್ ಗೆಹ್ಲೋಟ್

Public TV
2 Min Read

ಜೈಪುರ: ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯ ಪ್ರಕರಣಗಳಿಂದ ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದ್ದ ರಾಜಸ್ಥಾನ ಸರ್ಕಾರ (Rajasthan Government) ಮಹತ್ವದ ಘೋಷಣೆ ಮಾಡಿದೆ. ರಾಜ್ಯದಲ್ಲಿ ಅತ್ಯಾಚಾರ ಆರೋಪಿಗಳು ಹಾಗೂ ಅಪರಾಧ ಕೃತ್ಯ ಹಿನ್ನೆಲೆ ಉಳ್ಳವರಿಗೆ ಸರ್ಕಾರಿ ಉದ್ಯೋಗ (Government Jobs) ನೀಡುವುದಿಲ್ಲ ಎಂದು ಘೋಷಣೆ ಮಾಡಿದೆ.

ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಪರಾಧ ಕೃತ್ಯಗಳನ್ನ ತಡೆಯಲು ಶಿಸ್ತು ಕ್ರಮದ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಾಲಕಿಯರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಕ್ಕೆ ಯತ್ನ ಇತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರಿಗೆ ಸರ್ಕಾರಿ ಉದ್ಯೋಗ ನಿಷೇಧಿಸಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಅನರ್ಹತೆ ಆದೇಶ ವಾಪಸ್ ಬಳಿಕ ಮೊದಲ ಬಾರಿಗೆ ವಯನಾಡ್‌ಗೆ ಭೇಟಿ ನೀಡಲಿರುವ ರಾಗಾ

ಅಪರಾಧ ಹಿನ್ನೆಲೆ ಉಳ್ಳವರನ್ನು ಪತ್ತೆ ಮಾಡಲು ಪೊಲೀಸ್ ಠಾಣೆಗಳಲ್ಲಿ ದಾಖಲೆಗಳನ್ನ ಪರಿಶೀಲಿಸಲಾಗುತ್ತಿದೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳ ಕುರಿತು ಬಿಜೆಪಿ ಆಡಳಿತ ಕಾಂಗ್ರೆಸ್ ಪಕ್ಷದ ಮೇಲೆ ಟೀಕಾ ಪ್ರಹಾರ ನಡೆಸುತ್ತಿರುವ ನಡುವೆ ಸರ್ಕಾರ ಈ ಘೋಷಣೆ ಮಾಡಿದೆ.

ಇದೇ ಆಗಸ್ಟ್ 2ರಂದು ಬಿಲ್ವಾರ ಜಿಲ್ಲೆಯ ಕಲ್ಲಿದ್ದಲು ಕುಲುಮೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಅತ್ಯಾಚಾರ ಎಸಗಿದ ಬಳಿಕ ಬಾಲಕಿಯನ್ನ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಓರ್ವ ಮಹಿಳೆ ಸೇರಿ 7 ಜನರನ್ನ ಬಂಧಿಸಲಾಗಿದೆ. ಈ ಪ್ರಕರಣದ ಬಳಿಕ ಎಚ್ಚೆತ್ತುಕೊಂಡ ಸರ್ಕಾರ ಅಪರಾಧ ಕೃತ್ಯ ಹಿನ್ನೆಲೆ ಉಳ್ಳವರಿಗೆ ಸರ್ಕಾರಿ ಉದ್ಯೋಗ ನೀಡದಂತೆ ಸೂಚಿಸಿದೆ.

ಬಿಲ್ವಾರಾ ಮತ್ತು ಜೋಧ್‌ಪುರದಂತಹ ಘಟನೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಪರಾಧ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿರುವುದಾಗಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆಯನ್ನು ವಿರೋಧಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್