ಗ್ಯಾರಂಟಿಯಿಂದ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಲ್ಲಿ ದುಡ್ಡಿಲ್ಲ: ಸ್ವಪಕ್ಷದ ವಿರುದ್ಧ ಶಾಸಕ ಅಲ್ಲಮಪ್ರಭು ಪಾಟೀಲ್ ಅಸಮಾಧಾನ

Public TV
1 Min Read

ಕಲಬುರಗಿ: ಲೋಕಸಭೆ ಚುನಾವಣೆ (Lok Sabha Election) ಸನಿಹದಲ್ಲಿ ಕಾಂಗ್ರೆಸ್ (Congress) ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್‌ನಲ್ಲಿ ಅಪಸ್ವರ ವ್ಯಕ್ತವಾಗುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಲ್ಲಮ ಪ್ರಭು ಪಾಟೀಲ್ (Allamprabhu Patil) ಬಹಿರಂಗವಾಗಿಯೇ ಅಸಮಧಾನ ಹೊರಹಾಕಿದ್ದಾರೆ.

ಐದು ಗ್ಯಾರಂಟಿ ಯೋಜನೆಗಳಿಗೆ (Gurantee Scheme) 65 ಸಾವಿರ ಕೋಟಿ ರೂ. ಖರ್ಚಾಗುತ್ತಿದೆ. ಮಹಿಳೆಯರಿಗೆ ಎರಡು ಸಾವಿರ ಬರುತ್ತಿದೆ. ಬಸ್‌ನಲ್ಲಿ ಫ್ರೀಯಾಗಿ ಸಂಚರಿಸುತ್ತಿದ್ದೀರಿ. ಫ್ರೀ ಕರೆಂಟ್ ಇದೆ, ಉಚಿತವಾಗಿ ಅಕ್ಕಿ ನೀಡಲಾಗುತ್ತಿದೆ. ಇದೆಲ್ಲದರ ಪರಿಣಾಮ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಆಗುತ್ತಿದೆ. ಜನರ ಕೈಯಲ್ಲಿ ಬೈಸಿಕೊಳ್ಳುವಂತಾಗಿದೆ. ಎಲ್ಲಾ ನಮ್ಮ ಹಣೆ ಬರಹ ಎಂದು ಅಲ್ಲಮಪ್ರಭು ಪಾಟೀಲ್ ಜನರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಮಂಡ್ಯ ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಪ್ರಮುಖರ ಸಭೆ: ಸುಮಲತಾ

ಏನೋ ಅಭಿವೃದ್ಧಿ ಕೆಲಸ ಮಾಡಬೇಕು ಎಂದು ಅಂದುಕೊಂಡರೆ ಎಲ್ಲಾ ಹಣ ಗ್ಯಾರಂಟಿಗಳಿಗೆ ಹೋಗುತ್ತಿದೆ. ಇದು ಸರಿಯಲ್ಲ ಎಂದು ಹೇಳಿದ್ದಾರೆ. ಇವರ ಈ ಮಾತುಗಳಿಂದ ಕಾಂಗ್ರೆಸ್ ಸರ್ಕಾರ ಮುಜುಗರ ಅನುಭವಿಸುವಂತಾಗಿದೆ. ಇದನ್ನೂ ಓದಿ: ಪಂಚಭೂತಗಳಲ್ಲಿ ಸುರಪುರ ರಾಜ ಮನೆತನದ ಧಣಿ ಲೀನ

Share This Article