ಮಾರ್ಚ್ 31ರ ಬಳಿಕ ಕೋವಿಡ್ ನಿರ್ಬಂಧಗಳು ರದ್ದು

By
1 Min Read

ನವದೆಹಲಿ: ಮಾರ್ಚ್ 31ರ ಬಳಿಕ ಕೋವಿಡ್ ನಿರ್ಬಂಧಗಳನ್ನು ತೆಗೆದು ಹಾಕಲಾಗುವುದು ಎಂದು ಕೇಂದ್ರ ಬುಧವಾರ ತಿಳಿಸಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಾರಿಗೊಳಿಸಿದ್ದ ಕೋವಿಡ್ ಸುರಕ್ಷತಾ ಕ್ರಮಗಳನ್ನು ಮಾರ್ಚ್ 31ರ ಬಳಿಕ ಅನುಸರಿಸುವ ಅಗತ್ಯವಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ. ಇದನ್ನೂ ಓದಿ: ಕಡ್ಡಾಯ ಮಾಸ್ಕ್‌ ನಿಯಮ ಕೈಬಿಡಿ – ಸರ್ಕಾರಕ್ಕೆ ತಜ್ಞರ ಸಲಹೆ

ಕೇಂದ್ರ ವಿಧಿಸಿರುವ ಎಲ್ಲಾ ಅಸ್ತಿತ್ವದಲ್ಲಿರುವ ಕೋವಿಡ್ ನಿರ್ಬಂಧಗಳನ್ನು ಮಾರ್ಚ್ 31 ರಂದು ತೆಗೆದುಹಾಕಲು ನಿರ್ಧರಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳಲಾಗಿದ್ದ ವಿಪತ್ತು ನಿರ್ವಹಣಾ ಕಾಯ್ದೆಯನ್ನು ಅನ್ವಯಿಸುವ ಅಗತ್ಯವಿಲ್ಲ. ಆದರೆ ಸಾವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದನ್ನು ಮುಂದುವರಿಸಬೇಕು ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕೋವಿಡ್‌ ಲಸಿಕೆ ಕಡ್ಡಾಯವಲ್ಲ: ಸುಪ್ರೀಂಗೆ ಕೇಂದ್ರ ಸ್ಪಷ್ಟನೆ

ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಕೋವಿಡ್ ಸುರಕ್ಷತೆಗಾಗಿ ಕೇಂದ್ರ ವಿಧಿಸಿದ್ದ ಕ್ರಮಗಳು ಮಾರ್ಚ್ 31 ರಂದು ಮುಕ್ತಾಯಗೊಳ್ಳಲಿದೆ.

Share This Article
Leave a Comment

Leave a Reply

Your email address will not be published. Required fields are marked *