ಶ್ರೀರಾಮನ ಹೆಸರಿನಲ್ಲಿ ಮುಸ್ಲಿಮರ ಶಾಂತಿಗೆ ಭಂಗ ತರುವುದು ಬೇಡ: ಹೆಚ್‌ಡಿಕೆ ಮನವಿ

Public TV
1 Min Read

ಬೆಂಗಳೂರು: ಮತ್ತೆ ಮುಸ್ಲಿಮರ ಓಲೈಕೆಗೆ ಮುಂದಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಸಮುದಾಯದ ಪರ ಧ್ವನಿ ಎತ್ತಿದ್ದಾರೆ.

ಶ್ರೀರಾಮನ ಹೆಸರಿನಲ್ಲಿ ಶೋಭಾಯಾತ್ರೆ ನಡೆಸಲು ನನ್ನದೇನೂ ಅಭ್ಯಂತರವಿಲ್ಲ, ಅದಕ್ಕೆ ನನ್ನ ಬೆಂಬಲವಿದೆ. ಆದರೆ ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಮಾಡುವುದು ಬೇಡವೆಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ನಡೀತಿರೋ ಬೆಳವಣಿಗೆಗಳು ಆಡಳಿತ ಪಕ್ಷಕ್ಕೆ ಗೌರವ ತರುವುದಿಲ್ಲ: ಮಾಧುಸ್ವಾಮಿ ಅಸಮಾಧಾನ

ಇದರಿಂದ ಶಾಂತಿ ಕದಡುತ್ತದೆ, ಹಾಗಾಗುವುದು ಬೇಡ. ಒಂದು ಸಮುದಾಯದ ಜನರು ಈಗ ಉಪವಾಸ ಆಚರಣೆಯಲ್ಲಿದ್ದಾರೆ. ಶೋಭಾಯಾತ್ರೆ ಹಿಂದೂಗಳು ವಾಸ ಮಾಡುವ ಬಡಾವಣೆ, ಬೀದಿಗಳಲ್ಲಿ ಮಾಡಿ, ಅರ್ಧ ಗಂಟೆ ಸಾಲದಿದ್ದರೆ, ಒಂದು ಗಂಟೆ ಮಾಡಿ. ಇದಕ್ಕೆ ನನ್ನ ಬೆಂಬಲವಿದೆ. ಈ ಸಮಯದಲ್ಲಿ ಅವರ ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡುತ್ತೇನೆ. ಇದನ್ನೂ ಓದಿ: ಸೇಡು ತೀರಿಸಿಕೊಳ್ಳಲ್ಲ, ಕಾನೂನು ತನ್ನ ಮಾರ್ಗವನ್ನು ತೆಗೆದುಕೊಳ್ಳುತ್ತೆ: ಶೆಹಬಾಜ್ ಷರೀಫ್

KUMARASWAMY

ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು. ಈ ಹಿನ್ನೆಲೆಯಲ್ಲಿ ರಾಮನವಮಿ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ ಎಂದು ಕರೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *