– ಕ್ರಿಮಿನಲ್ ನೇತಾ ಬಿಲ್ ಕುರಿತು ಬಿಹಾರ ಬಹಿರಂಗ ಸಭೆಯಲ್ಲಿ ಮಾತನಾಡಿದ ಪ್ರಧಾನಿ
ಪಾಟ್ನಾ: ಜೈಲಿನಲ್ಲಿ ಕೂತು ಯಾರು ಕೂಡ ಆದೇಶ ನೀಡುವುದು ಬೇಡ ಎಂದು ಪ್ರಧಾನಿ ಮೋದಿ (PM Modi) ಹೇಳಿದ್ದಾರೆ. ಪ್ರಧಾನಿ, ಸಿಎಂ, ಸಚಿವರನ್ನು ಪದಚ್ಯುತಿಗೊಳಿಸುವ ಮಸೂದೆ ಬಗ್ಗೆ ಬಹಿರಂಗವಾಗಿ ಮೋದಿ ಮಾತನಾಡಿದ್ದಾರೆ.
ಬಿಹಾರದಲ್ಲಿ ಪಿಎಂಎವೈ-ಗ್ರಾಮೀಣ ಅಡಿಯಲ್ಲಿ 12,000 ಗ್ರಾಮೀಣ ಫಲಾನುಭವಿಗಳು ಮತ್ತು ಪಿಎಂಎವೈ-ನಗರ ಅಡಿಯಲ್ಲಿ 4,260 ಫಲಾನುಭವಿಗಳ ಗೃಹ ಪ್ರವೇಶ ಸಮಾರಂಭದ ಭಾಗವಾಗಿ ಪ್ರಧಾನಿ ಮೋದಿ ಕೆಲವು ಫಲಾನುಭವಿಗಳಿಗೆ ಕೀಲಿಗಳನ್ನು ಸಾಂಕೇತಿಕವಾಗಿ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಕ್ರಿಮಿನಲ್ ಕೇಸಲ್ಲಿ ಜನಪ್ರತಿನಿಧಿಗಳ ಬಂಧನವಾದ್ರೆ ಹುದ್ದೆಯಿಂದ ವಜಾ – ಮಸೂದೆ ಮಂಡನೆ, ಲೋಕಸಭೆಯಲ್ಲಿ ಕೋಲಾಹಲ
ಈ ವೇಳೆ ಮಾತನಾಡಿದ ಪ್ರಧಾನಿ, ಕ್ರಿಮಿನಲ್ ಹಿನ್ನೆಲೆಯ ಜನಪ್ರತಿನಿಧಿಗಳನ್ನು ವಜಾಗೊಳಿಸುವ ಗುರಿಯನ್ನು ಮಸೂದೆಯು ಹೊಂದಿದೆ. ಪ್ರಮುಖ ಹುದ್ದೆಗಳನ್ನು ಹೊಂದಿರುವ ಜನರು ಜೈಲಿನಿಂದ ಕಾರ್ಯನಿರ್ವಹಿಸಲು ಅವಕಾಶ ನೀಡಬಾರದು ಎಂದು ತಿಳಿಸಿದ್ದಾರೆ.
ಬಂಧನಕ್ಕೆ ಒಳಗಾಗಿ 30 ದಿನ ಜೈಲಿನಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿ, ಸಚಿವರನ್ನು ಪದಚ್ಯುತಿಗೊಳಿಸಲು ಅನುವು ಮಾಡಿಕೊಡುವ ಸಂವಿಧಾನ ತಿದ್ದುಪಡಿಯ ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಇದನ್ನೂ ಓದಿ: ಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಸಿಎಂ ವಜಾಕ್ಕೆ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ
ಲೋಕಸಭೆಯಲ್ಲಿ ಮಸೂದೆ ಮಂಡನೆ ವೇಳೆ ಕೋಲಾಹಲ ಸೃಷ್ಟಿಯಾಗಿತ್ತು. ಸರ್ಕಾರದ ಪ್ರಸ್ತಾವಕ್ಕೆ ‘ಇಂಡಿಯಾ’ ಕೂಟದ ಸಂಸದರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಗದ್ದಲ ಎಬ್ಬಿಸಿದ್ದರು.