ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಯಾರೂ ಊಹಿಸಲು‌ ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

By
1 Min Read

ಬೆಂಗಳೂರು: ಸೆಪ್ಟೆಂಬರ್ ಕ್ರಾಂತಿ, ಪೂರ್ಣಾವಧಿ ಸಿಎಂ, ನಾಯಕತ್ವ ಬದಲಾವಣೆ ಹೇಳಿಕೆಗಳಿಗೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ.

‌ಬೆಂಗಳೂರಿನಲ್ಲಿ (Bengaluru) ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಪಕ್ಷದ (Congress) ಹೈಕಮಾಂಡ್ ನಿರ್ಧಾರವನ್ನು ಯಾರಿಗೂ ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಮೂಲಕ ಏನೇ ನಿರ್ಧಾರ ಮಾಡುವುದಾದರೂ ಹೈಕಮಾಂಡ್ ತೀರ್ಮಾನ ಮಾಡೇ ಮಾಡುತ್ತದೆ ಎಂಬ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ನಮ್ಮ ಸರ್ಕಾರ 5 ವರ್ಷ ಬಂಡೆ ರೀತಿ ಇರುತ್ತೆ: ಒಟ್ಟಾಗಿಯೇ ಇದ್ದೇವೆ ಎಂದು ಹೇಳಿ ಡಿಕೆಶಿಯ ಕೈ ಎತ್ತಿದ ಸಿಎಂ

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ಏನು ನಿರ್ಧರಿಸುತ್ತದೆ ಅನ್ನೋದನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಅದು ಪಕ್ಷದ ಹೈಕಮಾಂಡ್ ಕೈಯಲ್ಲಿದೆ. ಅದು ಹೈಕಮಾಂಡ್‌ಗೆ ಬಿಟ್ಟಿದ್ದು. ಮುಂದಿನ ಕ್ರಮ ತೆಗೆದುಕೊಳ್ಳುವ ಅಧಿಕಾರ ಹೈಕಮಾಂಡ್‌ಗೆ ಇದೆ. ಆದರೆ ಯಾರೂ ಅನಗತ್ಯವಾಗಿ ಸಮಸ್ಯೆಗಳನ್ನು ಸೃಷ್ಟಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಲಲಿತ್ ಮೋದಿಗೆ ಶಾಕ್ – ಬಿಸಿಸಿಐನಿಂದ ಇಡಿ ದಂಡ ಪಾವತಿಸಲು ಕೋರಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ

Share This Article