ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ನೇಮಕವಾಗಿಲ್ಲ: ಸಿಎಂ ಕಚೇರಿ ಸ್ಪಷ್ಟನೆ

Public TV
1 Min Read

ನವದೆಹಲಿ: ಕಾಂಗ್ರೆಸ್‌ (Congress) ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು (CM Siddaramaiah) ನೇಮಕ ಮಾಡಿಲ್ಲ ಎಂದು ಸಿಎಂ ಕಚೇರಿ ತಿಳಿಸಿದೆ.

ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಅಂತಹ ಯಾವುದೇ ನೇಮಕಾತಿ ನಡೆದಿಲ್ಲ ಎಂದು ಹೇಳಿದೆ.

ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ.‌ ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿಗಳು ವಹಿಸಿಕೊಂಡಿದ್ದು ಸಭೆ ಕೆಪಿಸಿಸಿ (KPCC) ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ. ಇದನ್ನೂ ಓದಿ: ಎಐಸಿಸಿ ಒಬಿಸಿ ಕಮಿಟಿ ಅಧ್ಯಕ್ಷ ಸ್ಥಾನಕ್ಕೆ ಸಿಎಂ ನೇಮಕ ಪೇಪರ್‌ ಓದಿ ವಿಚಾರ ಗೊತ್ತಾಯ್ತು ಎಂದ ಸಿದ್ದರಾಮಯ್ಯ!

ವಿವಿಧ ರಾಜ್ಯಗಳ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಎಐಸಿಸಿಯ ಒಬಿಸಿ ಘಟಕದ ಸಲಹ ಸಮಿತಿಗೆ ಬೇರೆ ಬೇರೆ ರಾಜ್ಯದ ಪ್ರಮುಖ 24 ಒಬಿಸಿ ನಾಯಕರನ್ನ ಸಲಹೆಗಾರರಾಗಿ ನೇಮಿಸಲಾಗಿದೆ. ಕೆಲವು ಮಾಜಿ ಸಿಎಂಗಳು ಇದರಲ್ಲಿ ಇದ್ದಾರೆ ಎಂದು ಸಿದ್ದರಾಮಯ್ಯನವರ ಕಚೇರಿ ತಿಳಿಸಿದೆ.

Share This Article