ಅಮುಲ್ ಜೊತೆ ಕೆಎಂಎಫ್‌ ವಿಲೀನ ಇಲ್ಲ: ಸಿಎಂ ಬೊಮ್ಮಾಯಿ

Public TV
1 Min Read

ಬೆಂಗಳೂರು: ಗುಜರಾತ್‌ನ ಅಮುಲ್(Amul) ಜೊತೆ ಕೆಎಂಎಫ್‌(KMF) ವಿಲೀನ ಮಾಡುವುದಿಲ್ಲ ಎಂದು ಸಿಎಂ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ.

ಗೃಹ ಸಚಿವ ಅಮಿತ್‌ ಶಾ(Amit Shah) ಹೇಳಿಕೆ ಸಂಬಂಧ ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಸಿಎಂ ಆಗಿ ಹೇಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಅಮುಲ್ ಕೆಎಂಎಫ್‌ ವಿಲೀನ ಮಾಡುವುದಿಲ್ಲ. ಅಮಿತ್ ಶಾ ತಮ್ಮ ಭಾಷಣದಲ್ಲಿ ವಿಲೀನ ಮಾಡುತ್ತೇವೆ ಎಂದು ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: `ನಂದಿನಿ’ ಕನ್ನಡಿಗರ ಜೀವನಾಡಿ, ಅದರ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ HDK ಎಚ್ಚರಿಕೆ

ಯಾರಿಗೂ ತಪ್ಪು ಕಲ್ಪನೆ ‌ಬೇಡ. ಮುಂದೆ 100 ವರ್ಷವಾದರೂ ಕೆಎಂಎಫ್‌ ಹಾಗೆಯೇ ಇರುತ್ತದೆ. ಊಹೆ ಮಾಡಿ ಟೀಕೆ ಮಾಡುವವರಿಗೆ ಏನು ಹೇಳುವುದು? ಒಬ್ಬರಿಗೊಬ್ಬರು ತಾಂತ್ರಿಕ ಸಹಾಯದಿಂದ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಯಾರಿಗೂ ತಪ್ಪು ತಿಳುವಳಿಕೆ ಬೇಡ ಎಂದು ತಿಳಿಸಿದರು.

ಕೆಲ ಭಾಗದಲ್ಲಿ ತಾಂತ್ರಿಕ, ಆಡಳಿತ ವಿಚಾರಗಳನ್ನು ಹಂಚಿಕೊಂಡು ಕೆಲಸ ಮಾಡಬೇಕು ಎಂದು ಅಮಿತ್‌ ಶಾ ಹೇಳಿದ್ದಾರೆ. ಅದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಿಎಂ ಹೇಳಿದರು.

ಶಾ ಹೇಳಿದ್ದೇನು?
ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಮಿಲ್ಕ್ ಡೈರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಮಿತ್ ಶಾ, ಗುಜರಾತ್‌ನ `ಅಮುಲ್’ ಜತೆ ಕರ್ನಾಟಕದ `ನಂದಿನಿ’ಯನ್ನು ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಗುಜರಾತ್‌ನಲ್ಲಿ ಸಹಕಾರ ಒಕ್ಕೂಟವು ಪ್ರಗತಿಯ ಹಾದಿಯಲ್ಲಿದೆ. ಹಾಗೆಯೇ 1975 ರಿಂದಲೂ ಕೆಎಂಎಫ್ ಕೂಡ ಅಭಿವೃದ್ಧಿ ಹೊಂದುತ್ತಿದೆ. ಅಮೂಲ್ ಹಾಗೂ ನಂದಿನಿ ಒಂದಾದರೆ ಕರ್ನಾಟಕದ ಹಾಲು ಉತ್ಪಾದಕರಿಗೆ ಇನ್ನಷ್ಟು ಅನುಕೂಲವಾಗುತ್ತದೆ. ಮುಂದಿನ ಮೂರು ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷಕ್ಕೂ ಅಧಿಕ ಪ್ರಾಥಮಿಕ ಡೈರಿಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪನೆ ಮಾಡಲಾಗುವುದು. ಆ ಮೂಲಕ ಹಾಲಿನ ಉತ್ಪನ್ನಗಳನ್ನು ಇತರ ರಾಷ್ಟ್ರಗಳಿಗೆ ರಫ್ತು ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *