ಜೆಡಿಎಸ್ ಸೇರಿದಂತೆ ರಾಜ್ಯದಲ್ಲಿ ಯಾವುದೇ ಪ್ರಾದೇಶಿಕ ಪಕ್ಷ ಪರಿಣಾಮ ಬೀರದು: ಶ್ರೀರಾಮುಲು

Public TV
2 Min Read

ಬಳ್ಳಾರಿ: ರಾಜ್ಯದಲ್ಲಿ ಜೆಡಿಎಸ್ (JDS) ಸೇರಿದಂತೆ ಯಾವುದೇ ಪ್ರಾದೇಶಿಕ ಪಕ್ಷ ಪರಿಣಾಮ ಬೀರದು ಎಂದು ಸಾರಿಗೆ ಸಚಿವ ಶ್ರೀರಾಮುಲು (Sriramulu) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪರೋಕ್ಷವಾಗಿ ಸ್ನೇಹಿತ ಜನಾರ್ದನ ರೆಡ್ಡಿ ಪಕ್ಷ ಪ್ರಭಾವ ಬೀರಲ್ಲಾ ಎಂದು ರಾಮುಲು ಹೇಳಿದ್ದಾರೆ. ರಾಮುಲು ಮುಖ ನೋಡಿ ಮತ್ತೊಬ್ಬರ ಮುಖ ನೋಡಿ ಮತ ಹಾಕಬೇಡಿ. ಮೈಸೂರು ಭಾಗ ಅಷ್ಟೇ ಅಲ್ಲಾ ಕಲ್ಯಾಣ ಕರ್ಣಾಟಕ ಎಲ್ಲ ಭಾಗದಲ್ಲಿ ಬಿಜೆಪಿ ಪಕ್ಷ ಗೆಲ್ಲಲಿದೆ ಎಂದರು. ಇದನ್ನೂ ಓದಿ: ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಚೇತರಿಕೆಗಾಗಿ ಹುಕ್ಕೇರಿ ಹಿರೇಮಠದಿಂದ ಮಹಾಮೃತ್ಯುಂಜಯ ಹೋಮ

ಯಾವುದೇ ಪ್ರಾದೇಶಿಕ ಪಕ್ಷ ಪರಿಣಾಮ ಬೀರುವ ಮಾತೇ ಇಲ್ಲ. ಸ್ವಂತ ಬಲದಿಂದ ನಾವು 150 ಸ್ಥಾನ ಗೆಲ್ಲುತ್ತೇವೆ. ಪ್ರಮುಖವಾಗಿ ಉತ್ತರ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಪ್ರಭಾವ ಬೀರಲ್ಲ. ಬಳ್ಳಾರಿ (Bellary) ವಿಜಯನಗರ ಅವಳಿ ಜಿಲ್ಲೆಯ ಮೂರು ಸಾಮಾನ್ಯ ಕ್ಷೇತ್ರದಲ್ಲಿ ಆನಂದ್ ಸಿಂಗ್ (Aanand Singh), ಕರುಣಾಕರ್ ರೆಡ್ಡಿ, ಸೋಮಶೇಖರ್ ರೆಡ್ಡಿ (Somashekhar Reddy) ಗೆಲುತ್ತಾರೆ. ಹೀಗಂತ ಹೇಳುವ ಮೂಲಕ ಸ್ನೇಹಿತ ಜನಾರ್ದನ ರೆಡ್ಡಿ ಬಿಟ್ಟು, ಉಳಿದ ರೆಡ್ಡಿ ಸಹೋದರರ ಕಡೆ ರಾಮಲು ವಾಲಿದಂಗಿದೆ. ಇದನ್ನೂ ಓದಿ: ಸುಮಲತಾ ಕೂಡ ಬಿಜೆಪಿ ಅಸೋಸಿಯೇಟ್‌ ಮೆಂಬರ್ – ಡಿಕೆಶಿ ವ್ಯಂಗ್ಯ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಪಕ್ಷ ಕಟ್ಟಬಹುದು, ಚುನಾವಣೆಯಲ್ಲಿ ಸ್ಪರ್ಧಿಸಬಹು. ಆದರೆ ಜನರ ಒಲವು, ಪಕ್ಷದ ಮೇಲೆ ಇದೆ. ದೇಶದ ಚುನಾವಣೆ ಮೋದಿ ಹಾಗೂ ರಾಜ್ಯದ ಚುನಾವಣೆ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಬಿ ಎಸ್ ವೈ (BS Yediyurappa) ಅವರ ನೇತೃತ್ವದಲ್ಲಿ ನಡೆಯಲಿದೆ. ಪ್ರಾದೇಶಿಕ ಪಕ್ಷದಿಂದ ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಇಲ್ಲ. ನಮ್ಮ ಕಾರ್ಯಕರ್ತರು ಒಗ್ಗಟ್ಟಾಗಿದ್ದಾರೆ ಎಂದರು.

ಇದೇ ವೇಳೆ ಮೀಸಲಾತಿ ವಿಚಾರದ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಮೀಸಲಾತಿ ವಿಚಾರದಲ್ಲಿ ಯಾವುದೇ ಯಾರಿಗೂ ನ್ಯಾಯ ಕೊಟ್ಟಿಲ್ಲ. ಮೀಸಲಾತಿ ವಿಚಾರದಲ್ಲಿ ಡಿ.ಕೆ ಶಿವಕುಮಾರ್ (DK Shivakumar) ಮಾತನಾಡುವ ನೈತಿಕತೆ ಇಲ್ಲ. ಐವತ್ತು ವರ್ಷಗಳಿಂದ ಕಾಂಗ್ರೆಸ್ ಜನರಿಗೆ ಟೋಪಿ ಹಾಕುತ್ತಾ ಬಂದಿದೆ ಎಂದು ಕಿಡಿಕಾರಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *