ಕೋವಿಡ್‌ ಲಸಿಕೆ ಪಡೆದ ಪ್ರಮಾಣ ಪತ್ರ ಇಲ್ಲದಿದ್ರೆ ನೌಕರರಿಗೆ ಸಂಬಳ ನೀಡಲ್ಲ – ಪಂಜಾಬ್‌ ಸರ್ಕಾರ

Public TV
1 Min Read

ಚಂಡೀಗಢ: ಕೋವಿಡ್‌ ಲಸಿಕೆ ಪಡೆದ ಪ್ರಮಾಣ ಪತ್ರ ಇಲ್ಲದ ಸರ್ಕಾರಿ ನೌಕರರಿಗೆ ಸಂಬಳ ನೀಡುವುದಿಲ್ಲ ಎಂದು ಪಂಜಾಬ್‌ ಸರ್ಕಾರ ತಿಳಿಸಿದೆ.

ಕೋವಿಡ್‌ ಲಸಿಕೆಯ ಎರಡೂ ಡೋಸ್‌ ಪಡೆದಿದ್ದರೆ ಅಥವಾ ಒಂದು ಡೋಸ್‌ ಮಾತ್ರ ಪಡೆದಿದ್ದರೆ ಅದಕ್ಕೆ ಸಂಬಂಧಿಸಿದ ಪ್ರಮಾಣ ಪತ್ರವನ್ನು ಸರ್ಕಾರದ ಲಸಿಕೀಕರಣ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಿಸಿರಬೇಕು. ಅಂತಹವರಿಗೆ ಸಂಬಳ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಗೂಗಲ್ ನಂತರ ಇದೀಗ ಇಂಟೆಲ್- ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನ ಇಲ್ಲ

ಕೊರೊನಾ ವೈರಸ್‌ನ ರೂಪಾಂತರಿ ಓಮಿಕ್ರಾನ್‌ ಸೋಂಕು ವೇಗವಾಗಿ ಹರಡುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜನರು ಲಸಿಕೆ ಹಾಕಿಸಿಕೊಳ್ಳಲು ಪಂಜಾಬ್‌ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಮುಂದಾಗಿದೆ.

ಲಸಿಕೀಕರಣದ ಪ್ರಮಾಣ ಪತ್ರಗಳನ್ನು ಪಂಜಾಬ್‌ ಸರ್ಕಾರದ ಐಎಚ್‌ಆರ್‌ಎಂಎಸ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಆಗ ನೌಕರರಿಗೆ ಸಂಬಳ ಪಾವತಿ, ನಿವೃತ್ತಿ ಪ್ರಯೋಜನ ಪ್ರಕ್ರಿಯೆಗಳನ್ನು ಸುವ್ಯವಸ್ಥೆಗೊಳಿಸಲು ಸಾಫ್ಟ್‌ವೇರ್‌ ಸಹಾಯ ಮಾಡುತ್ತದೆ. ಇದನ್ನೂ ಓದಿ: 2 ತಿಂಗಳ ಹಿಂದೆಯೇ ಮೃತಪಟ್ಟ ಮಹಿಳೆಗೂ ಕೋವಿಡ್ ವ್ಯಾಕ್ಸಿನ್ – ಪತಿ ಮೊಬೈಲ್‍ಗೆ ಸಂದೇಶ

ಭಾರತದಲ್ಲಿ ಈವರೆಗೆ 210 ಓಮಿಕ್ರಾನ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಆ ಪೈಕಿ 90 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *