ಸಿಎಂ ಎಚ್‍ಡಿಕೆ ವಿರುದ್ಧ ದೂರು ದಾಖಲು

Public TV
1 Min Read

ತುಮಕೂರು: ಪಾಕಿಸ್ತಾನ ಭಯೋತ್ಪಾದಕರ ವಿರುದ್ಧ ಭಾರತೀಯ ವಾಯುಪಡೆ ನಡೆಸಿದ ದಾಳಿ ಸಂಬಂಧ ಸಿಎಂ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ವಿರುದ್ಧ ಮಧುಗಿರಿ ತಾಲೂಕಿನ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು (ಎನ್‍ಸಿಆರ್) ನೀಡಲಾಗಿದೆ.

ಹೊನ್ನಾಪುರ ಗ್ರಾಮದ ನಿವಾಸಿ ಅನಿಲ್ ಕುಮಾರ್ ಸಬರ್ ವಾಲ್ ಎಂಬವರು ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಆಧರಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರಿನಲ್ಲೇನಿದೆ?
ಮುಖ್ಯಮಂತ್ರಿಗಳು ಮಾಧ್ಯಮಗಳ ಮುಂದೆಯೇ ಹೇಳಿಕೆ ನೀಡಿದ್ದು, ಭಾರತದ ವಾಯುದಳ ಏರ್ ಸ್ಟೈಕ್ ಮಾಡಿದ್ದ 300 ಭಯೋತ್ಪಾದಕರು ಸಾವನ್ನಪ್ಪಿದ್ದರು. ಇದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕೆಲವರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದರು. ಆದರೆ ಇದರಿಂದ ಒಂದು ಸಮುದಾಯಕ್ಕೆ ನೋವಾಗುತ್ತದೆ. ಈ ಸಮುದಾಯದ ನೋವು ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗುತ್ತದೆ. ಆದ್ದರಿಂದ ಸೈನ್ಯದ ಕಾರ್ಯಾಚರಣೆಗಳನ್ನು ಸಂಭ್ರಮಿಸಬಾರದು ಎಂದು ಹೇಳಿ ನಮ್ಮ ದೇಶಭಕ್ತಿಗೆ ಧಕ್ಕೆ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಮುಖ್ಯಮಂತ್ರಿಗಳೇ ಪ್ರೇರಣೆ ನೀಡುತ್ತಿರುವುದರಿಂದ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸಿ ತಕ್ಷಣ ಬಂಧನ ಮಾಡಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನು ಓದಿ: ಬಿಜೆಪಿ ವಿಷಯಗಳನ್ನ ತಿರುಚುವುದರಲ್ಲಿ, ದೇಶ ಒಡೆಯೋದ್ರಲ್ಲಿ ನಿಸ್ಸೀಮರು: ಸಿಎಂ ಎಚ್‍ಡಿಕೆ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *