ಅಮಿತ್ ಶಾ ಭೇಟಿ ಮಾಡಿಲ್ಲ, ಫೋನ್‍ನಲ್ಲಿ ಮಾತುಕತೆ: ಸಿಎಂ ಬೊಮ್ಮಾಯಿ

Public TV
1 Min Read

ನವದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಯಲ್ಲಿ ಹೇಳಿದ್ದಾರೆ.

ಬೊಮ್ಮಾಯಿ ಅವರು ಶುಕ್ರವಾರ ದೆಹಲಿಗೆ ದಿಢೀರ್ ಎಂದು ಭೇಟಿ ನೀಡಿದ್ದು, ಯಾವ ಉದ್ದೇಶಕ್ಕೆ ಎಂದು ಭೇಟಿಯಾಗಿದ್ದಾರೆ ಎಂಬುದನ್ನು ತಿಳಿಸಿರಲಿಲ್ಲ. ಆದರೆ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಮಂತ್ರಿ ಅಮಿತ್ ಶಾ ಅವರನ್ನು ಭೇಟಿ ಮಾಡಲು ದೆಹಲಿಗೆ ಆಗಮಿಸಿದ್ದೆ. ತುರ್ತು ಕೆಲಸ ಇದ್ದ ಹಿನ್ನೆಲೆ ಅವರನ್ನು ಭೇಟಿಯಾಗಿಲ್ಲ. ಆದರೆ ಫೋನ್‍ನಲ್ಲಿ ಸುದೀರ್ಘ ಮಾತುಕತೆ ನಡೆಸಿದ್ದೇನೆ. ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಜೊತೆಗೆ ಚರ್ಚೆ ಮಾಡಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಕಾಂಗ್ರೆಸ್‍ನಲ್ಲಿ ಜೋರಾಯ್ತು ಪರಿಷತ್ ಟಿಕೆಟ್ ಗಲಾಟೆ

ಈ ಚರ್ಚೆಯಲ್ಲಿ ನಾಲ್ಕು ವಿಧಾನಪರಿಷತ್ ಸ್ಥಾನಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಕೋರ್ ಕಮಿಟಿ ಪಟ್ಟಿ ನೀಡಲಾಗಿದೆ. ಈ ಬಗ್ಗೆ ಅಂತಿಮ ತೀರ್ಮಾನ ಹೈಕಮಾಂಡ್ ಕೈಗೊಳ್ಳಲಿದೆ. ಸಂಪುಟ ವಿಸ್ತರಣೆ ಪುನಾರಚನೆ ಬಗ್ಗೆ ಚರ್ಚೆ ಮಾಡಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿಲ್ಲ ಎಂದರು.

ಮಳೆ ಅವಾಂತರ ಕುರಿತು ಮಾತನಾಡಿದ ಅವರು, ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎನ್‍ಡಿಆರ್‌ಎಫ್ ನಿಧಿಯಲ್ಲಿ ಪರಿಹಾರ ಬಿಡುಗಡೆ ಮಾಡಲಾಗುವುದು. ಪರಿಸ್ಥಿತಿ ಅವಲೋಕಿಸಿ ದಾವೋಸ್ ಪ್ರವಾಸದ ಬಗ್ಗೆ ನಿರ್ಧಾರ ಮಾಡ್ತಿನಿ ಎಂದು ವಿವರಿಸಿದರು.

ಬೊಮ್ಮಾಯಿ ಅವರು ಶುಕ್ರವಾರ ತಡರಾತ್ರಿ ಒಂದು ಗಂಟೆಗೆ ದೆಹಲಿಯ ಕರ್ನಾಟಕ ಭವನಕ್ಕೆ ಆಗಮಿಸಿದರು. ಬೆಂಗಳೂರಿನಿಂದ ಆಗಮಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಯಲ್ಲಿ ಬೊಮ್ಮಾಯಿ ಅವರು ಉಳಿದುಕೊಂಡಿದ್ದರು. ತಡ ರಾತ್ರಿವರೆಗೂ ಬೊಮ್ಮಾಯಿ ಅವರು ಅಮಿತ್ ಶಾ ಭೇಟಿಗಾಗಿ ಕಾದಿದ್ದಾರೆ. ಆದರೆ ಭೇಟಿಗೆ ಸಮಯ ನಿಗಧಿಯಾಗದ ಹಿನ್ನೆಲೆ ಕರ್ನಾಟಕ ಭವನಕ್ಕೆ ವಾಪಸ್ ಆಗಿದ್ದಾರೆ. ಇದನ್ನೂ ಓದಿ: ಕರಾವಳಿಯಲ್ಲಿರುವ ನದಿಗಳ ಮರಳನ್ನು ಮಾರುವಂತಿಲ್ಲ: ಎನ್‌ಜಿಟಿ

ನಿಗದಿ ಪ್ರಕಾರ ಬೊಮ್ಮಾಯಿ ಅವರು ಶನಿವಾರ ಬೆಳಗ್ಗೆ 6:30ಕ್ಕೆ ಬೆಂಗಳೂರಿಗೆ ತೆರಳಬೇಕಿತ್ತು.

Share This Article
Leave a Comment

Leave a Reply

Your email address will not be published. Required fields are marked *