ಪಾಕ್‌ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ

Public TV
1 Min Read

– ಸಿಎಂ ವಿರುದ್ಧ ಆರ್‌ ಅಶೋಕ್‌ ಕಿಡಿ

ಬೆಂಗಳೂರು: ಪಾಕಿಸ್ತಾನ (Pakistan) ಮಾಧ್ಯಮಗಳಲ್ಲೂ ಸಿಎಂ ಸಿದ್ದರಾಮಯ್ಯ (CM Siddaramaiah) ಈಗ ಫೇಮಸ್‌ ಆಗಿದ್ದಾರೆ. ಭಾರತ ಯುದ್ಧ ಮಾಡಬಾರದು ಎಂದಿದ್ದ ಸಿಎಂ ಅವರ ಹೇಳಿಕೆಯನ್ನು ಪಾಕ್‌ ಮಾಧ್ಯಮಗಳು ಪ್ರಸಾರ ಮಾಡಿವೆ.

ಪಾಕ್‌ ಮಾಧ್ಯಮಗಳಲ್ಲಿ ಸಿದ್ದರಾಮಯ್ಯನವರ ಹೇಳಿಕೆ ಪ್ರಸಾರವಾದ ಬೆನ್ನಲ್ಲೇ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ (R Ashok) ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?
ಪಾಕಿಸ್ತಾನ ರತ್ನ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರೆಂಟಿ. ಇದನ್ನೂ ಓದಿ: ಕಾಶ್ಮೀರದಲ್ಲಿ ಐಇಡಿ ಸ್ಫೋಟಿಸಿ ಮತ್ತೊಬ್ಬ ಉಗ್ರನ ಮನೆ ಉಡೀಸ್!

ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ.

ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರುರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತದ್ದೀರಲ್ಲ, ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ.

 

Share This Article