ʼಶಿವಶಕ್ತಿʼ ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ, ಹೊರಗಿನ ಹುಡುಕಾಟಕ್ಕೆ ವಿಜ್ಞಾನವಾದರೆ ಅಂತರಂಗಕ್ಕೆ ಆಧ್ಯಾತ್ಮ: ಇಸ್ರೋ ಅಧ್ಯಕ್ಷ

Public TV
2 Min Read

ತಿರುವನಂತಪುರಂ: ವಿಕ್ರಂ ಲ್ಯಾಂಡರ್‌ (Vikram Lander) ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ಸ್ಥಳವನ್ನು ಶಿವಶಕ್ತಿ ಪಾಯಿಂಟ್‌ (Shivashakti Point) ಎಂದು ಪ್ರಧಾನಿ ಮೋದಿ ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಇಸ್ರೋ (ISRO) ಅಧ್ಯಕ್ಷ ಸೋಮನಾಥ್‌ (Somanath) ಹೇಳಿದ್ದಾರೆ.

ಚಂದ್ರಯಾನ-3 (Chandrayaan-3) ಯಶಸ್ವಿಯಾದ ಬಳಿಕ ಕೇರಳದ ತಿರುವನಂತಪುರಂನಲ್ಲಿರುವ ಪೌರ್ಣಮಿಕಾವು-ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಸೋಮನಾಥ್‌ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ವಿಕ್ರಂ ಲ್ಯಾಂಡರ್‌ ಚಂದ್ರನನ್ನು ಸ್ಪರ್ಶಿಸಿದ ಜಾಗಕ್ಕೆ ‘ಶಿವಶಕ್ತಿ’ ಎಂದು ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆ ಸ್ಥಳಕ್ಕೆ ಹೆಸರಿಡುವ ಹಕ್ಕು ರಾಷ್ಟ್ರಕ್ಕೆ ಇದೆ ಎಂದರು. ಇದನ್ನೂ ಓದಿ: ಚಂದ್ರಲೋಕದಲ್ಲಿ ಜೈ ಹಿಂದ್‌ – ಮೊದಲ ಬಾರಿಗೆ ತಾಪಮಾನ ಪರೀಕ್ಷೆ

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನಮಗೆಲ್ಲರಿಗೂ ಸರಿಹೊಂದುವ ರೀತಿಯಲ್ಲಿ ಶಿವಶಕ್ತಿ ಅರ್ಥವನ್ನು ವಿವರಿಸಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ. ಚಂದ್ರಯಾನ–2 ಪತನವಾಗಿದ್ದ ಸ್ಥಳವನ್ನು ‘ತಿರಂಗಾ ಪಾಯಿಂಟ್‌ʼ ಎಂದು ಹೆಸರನ್ನು ಇರಿಸಿದ್ದಾರೆ. ಎರಡೂ ಭಾರತೀಯ ಧ್ವನಿಯ ಹೆಸರುಗಳಾಗಿವೆ. ನಾವು ಏನು ಮಾಡುತ್ತಿದ್ದೇವೆ ಎಂಬುದರ ಮಹತ್ವ ನಮಗೆ ತಿಳಿದಿರಬೇಕು  ಎಂದು ಹೇಳಿದರು.

ನಾನೊಬ್ಬ ಅನ್ವೇಷಕ. ನಾನು ಚಂದ್ರನನ್ನು ಅನ್ವೇಷಿಸುತ್ತೇನೆ. ಆಂತರಂಗದ ಜಾಗವನ್ನು ಅನ್ವೇಷಿಸುತ್ತೇನೆ. ಹೊರಗಿನ ಹುಡುಕಾಟಕ್ಕೆ ವಿಜ್ಞಾನ. ಅಂತರಂಗದ ಹುಡುಕಾಟಕ್ಕೆ ಆಧ್ಯಾತ್ಮ. ನಾನು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತೇನೆ ಮತ್ತು ಅನೇಕ ಗ್ರಂಥಗಳನ್ನು ಓದುತ್ತೇನೆ. ಈ ಬ್ರಹ್ಮಾಂಡದಲ್ಲಿ ನಮ್ಮ ಅಸ್ತಿತ್ವ ಮತ್ತು ನಮ್ಮ ಪ್ರಯಾಣದ ಅರ್ಥವನ್ನು ಕಂಡುಹಿಡಿಯಲು ನಾನು ಪ್ರಯತ್ನಿಸುತ್ತೇನೆ. ಇದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಹೊರಗಡೆ ವಿಜ್ಞಾನ ಮಾಡಿದರೆ ಅಂತರಂಗಕ್ಕೆ ದೇವಸ್ಥಾನಗಳಿಗೆ ಬರುತ್ತೇನೆ ಎಂದು ಹೇಳಿದರು.

ಮಿಷನ್‌ನ ಪ್ರಸ್ತುತ ಸ್ಥಿತಿಯ ಬಗ್ಗೆ ಕೇಳಿದ್ದಕ್ಕೆ, ಎಲ್ಲವೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಚಂದ್ರಯಾನ 3, ಲ್ಯಾಂಡರ್, ರೋವರ್ ತುಂಬಾ ಆರೋಗ್ಯಕರವಾಗಿದ್ದು, ಬೋರ್ಡ್‌ನಲ್ಲಿರುವ ಎಲ್ಲಾ ಐದು ಉಪಕರಣಗಳನ್ನು ಸ್ವಿಚ್ ಆನ್ ಮಾಡಲಾಗಿದೆ. ಇವುಗಳು ಸುಂದರವಾದ ಡೇಟಾವನ್ನು ನೀಡುತ್ತಿದೆ. ಇನ್ನೂ ಹತ್ತು ದಿನಗಳು ಉಳಿದಿವೆ. ವಿವಿಧ ವಿಧಾನಗಳ ಸಂಪೂರ್ಣ ಸಾಮರ್ಥ್ಯದೊಂದಿಗೆ ನಾವು ಎಲ್ಲಾ ಪ್ರಯೋಗಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ತಿಳಿಸಿದರು.

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್