ಫೇಸ್‍ಬುಕ್ ಗೆಳೆಯನಿಗಾಗಿ ಭಾರತದಿಂದ ಪಾಕ್‍ಗೆ ತೆರಳಿದ ವಿವಾಹಿತೆ

Public TV
2 Min Read

ಜೈಪುರ: ತನ್ನ ಗೆಳೆಯನನ್ನು ಭೇಟಿಯಾಗಲು ಪಾಕಿಸ್ತಾನದಿಂದ (Pakistan) ಬಂದಿರುವ ಸೀಮಾ ಹೈದರ್ ಕುರಿತು ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಇದೀಗ ಭಾರತದಿಂದ (Indian Woman) ಮಹಿಳೆಯೊಬ್ಬಳು ಪಾಕಿಸ್ತಾನಕ್ಕೆ ತೆರಳಿದ ಪ್ರಸಂಗ ನಡೆದಿದೆ.

ಹೌದು. ಫೇಸ್‍ಬುಕ್ ಗೆಳೆಯನ (Facebook Friend) ಭೇಟಿಯಾಗಲು ಮಹಿಳೆಯೊಬ್ಬಳು ಭಾರತದ ಗಡಿ ದಾಟಿ ಪಾಕಿಸ್ತಾನಕ್ಕೆ ತೆರಳಿದ್ದಾಳೆ. ರಾಜಸ್ಥಾನದ ಬಿವಾಡಿ ಜಿಲ್ಲೆಯ ವಿವಾಹಿತೆ ತನ್ನ ಬಾಯ್‍ಫ್ರೆಂಡ್ ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯಕ್ಕೆ ಪ್ರಯಾಣ ಬೆಳೆಸುವ ಮೂಲಕ ಎಲ್ಲರ ಅಚ್ಚರಿಗೆ ಕಾರಣವಾಗಿದ್ದಾಳೆ.

ಮಹಿಳೆಯನ್ನು ಅಂಜು (Anju) ಎಂದು ಗುರುತಿಸಲಾಗಿದೆ. ಈಕೆಯ ಪತಿ ಅರವಿಂದ್ ಈ ಬಗ್ಗೆ ಪ್ರತಿಕ್ರಿಯಿಸಿ ಕೆಲ ದಿನಗಳ ಹಿಂದೆ ಅಂಜು ಜೈಪುರಕ್ಕೆ ತೆರಳಿದ್ದಾಳೆ. ಆದರೆ ಆಕೆ ಗಡಿ ದಾಟಿ ಹೋಗಿದ್ದಾಳೆ ಎಂಬುದು ಮಾಧ್ಯಮಗಳ ಮೂಲಕ ಭಾನುವಾರ ನನಗೆ ತಿಳಿಯಿತು ಎಂದರು. ಇದನ್ನೂ ಓದಿ: ಪ್ರಿಯಕರನಿಗಾಗಿ 6 ವರ್ಷದ ಮಗಳೊಂದಿಗೆ ಭಾರತಕ್ಕೆ ಹಾರಿಬಂದ 49ರ ಪೋಲೆಂಡ್‌ ಮಹಿಳೆ

ನಾನು ಆಕೆಯ ಜೊತೆ ವಾಟ್ಸಾಪ್ (Whatsapp) ಸಂಪರ್ಕದಲ್ಲಿದ್ದೆ. ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಕರೆ ಮಾಡಿ ತಾನು ಲಾಹೋರ್‍ನಲ್ಲಿದ್ದೇನೆ. ಎರಡು-ಮೂರು ದಿನಗಳಲ್ಲಿ ವಾಪಸ್ ಬರುವುದಾಗಿ ತಿಳಿಸಿದ್ದಳು ಎಂದು ಅರವಿಂದ್ ಹೇಳಿದರು. ಇದೇ ವೇಳೆ ಪತ್ನಿಯ ಲವ್ ಬಗ್ಗೆ ಕೇಳಿದಾಗ, ಈ ವಿಚಾರ ನನಗೆ ಗೊತ್ತಿದೆ. ನನ್ನ ಪತ್ನಿ ವಾಪಸ್ ಬಂದೇ ಬರುತ್ತಾಳೆ ಅನ್ನೋ ನಂಬಿಕೆಯಿದೆ ಎಂದು ಹೇಳಿದರು.

ಅರವಿಂದ್ ಭಿವಾಡಿಯಲ್ಲಿ ಕೆಲಸ ಮಾಡುತ್ತಿದ್ದು, ಅಂಜು ಖಾಸಗಿ ಸಂಸ್ಥೆಯೊಂದರಲ್ಲಿ ಬಯೋಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ದಂಪತಿ ಇಬ್ಬರು ಮಕ್ಕಳನ್ನು ಹೊಂದಿದ್ದು, ಅಂಜು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ಅರವಿಂದ್ ಅವರೊಂದಿಗೆ ಮದುವೆಯಾಗಿದ್ದಾರೆ. ಅರವಿಂದ್ ಅವರು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಅಂಜು ಅವರ ಸಹೋದರನೊಂದಿಗೆ ಭಿವಾಡಿಯಲ್ಲಿ ಬಾಡಿಗೆ ಫ್ಲಾಟ್‍ನಲ್ಲಿ ವಾಸವಾಗಿದ್ದರು.

ರಾಜಸ್ಥಾನ ಟು ಪಾಕಿಸ್ತಾನ: ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ನಸ್ರುಲ್ಲಾ ಮತ್ತು ಅಂಜು ಕೆಲವು ತಿಂಗಳ ಹಿಂದೆ ಫೇಸ್‍ಬುಕ್‍ನಲ್ಲಿ ಸ್ನೇಹಿತರಾದರು. ಇದೀಗ ಗುರುವಾರ ಅಂಜು ಜೈಪುರಕ್ಕೆ ಹೋಗುವ ನೆಪದಲ್ಲಿ ಭಿವಾಡಿಯಲ್ಲಿರುವ ತನ್ನ ಮನೆಯಿಂದ ಹೊರಟಿದ್ದಳು. ನಂತರ ಆಕೆ ತನ್ನ ಫೇಸ್‍ಬುಕ್ ಸ್ನೇಹಿತ ನಸ್ರುಲ್ಲಾಳನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳಿದ್ದಳು. ಇದನ್ನೂ ಓದಿ: ಬೇಗ ಬಂದುಬಿಡು ಸೀಮಾ, ಹೊಸ ಜೀವನ ಶುರು ಮಾಡೋಣ – ಸೌದಿಯಲ್ಲಿ ಮೊದಲ ಪತಿಯ ಗೋಳಾಟ

ಆಕೆ ಆರಂಭದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಳು. ಆಕೆಯ ಪ್ರಯಾಣ ದಾಖಲೆಗಳನ್ನು ಪರಿಶೀಲಿಸಿದ ನಂತರ ಬಿಡುಗಡೆ ಮಾಡಲಾಯಿತು. ಎಲ್ಲಾ ಪ್ರಯಾಣದ ದಾಖಲೆಗಳು ಸರಿಯಾಗಿವೆ ಎಂದು ಕಂಡುಬಂದ ನಂತರ ಆಕೆಗೆ ಹೋಗಲು ಅನುಮತಿ ನೀಡಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ದೇಶಕ್ಕೆ ಕೆಟ್ಟ ಹೆಸರು ತರುವುದನ್ನು ಖಚಿತಪಡಿಸಿಕೊಳ್ಳಲು ಅವರಿಗೆ ಭದ್ರತೆಯನ್ನು ಒದಗಿಸಲಾಗಿದೆ ಎಂಬುದಾಗಿ ವರದಿಯಾಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್