NSUI ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಕುವೆಂಪು ವಿವಿ ಕುಲಪತಿ ಕಚೇರಿ ಪೀಠೋಪಕರಣ ಧ್ವಂಸ

1 Min Read

ಶಿವಮೊಗ್ಗ: ಶಂಕರಘಟ್ಟದ (Shankaraghatta) ಕುವೆಂಪು ವಿಶ್ವವಿದ್ಯಾಲಯದಲ್ಲಿ (Kuvempu University) ಸಮಸ್ಯೆಗೆ ಸ್ಪಂದಿಸದ ಕುಲಪತಿಗಳ ವಿರುದ್ಧ ಎನ್‌ಎಸ್‌ಯುಐ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ (Students Protest) ತೀವ್ರ ಸ್ವರೂಪ ಪಡೆದುಕೊಂಡಿದೆ. ಕುಲಪತಿಗಳ ಕಚೇರಿ ಆವರಣದಲ್ಲಿದ್ದ ಕುರ್ಚಿ, ಪಾಟ್ ಎಲ್ಲವನ್ನೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪುಡಿ ಪುಡಿ ಮಾಡಿದ್ದಾರೆ.

ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸದ ವಿಸಿಗೆ ಧಿಕ್ಕಾರ ಕೂಗಿ, ಕಚೇರಿಯ ಬೋರ್ಡ್‌ಗೆ ಕಪ್ಪು ಮಸಿ ಬಳಿದಿದ್ದಾರೆ. 5 ತಿಂಗಳ ಹಿಂದೆ ನಡೆದ ಪರೀಕ್ಷೆಯ ಫಲಿತಾಂಶ ಇನ್ನೂ ಪ್ರಕಟಿಸಿಲ್ಲ. 1, 3 ಹಾಗೂ 5 ನೇ ಸೆಮಿಸ್ಟರ್ ಫಲಿತಾಂಶ ಪ್ರಕಟವಾಗಿಲ್ಲ. ಕಳೆದ 3 ವರ್ಷಗಳಿಂದ ಯಾವುದೇ ಅಂಕಪಟ್ಟಿ ವಿತರಿಸಿಲ್ಲ. ಪಾಸಿಂಗ್ ಸರ್ಟಿಫಿಕೇಟ್ ಹಾಗೂ ಪದವಿ ಪ್ರಮಾಣ ಪತ್ರ ನೀಡ್ತಿಲ್ಲ. ಡಿಜಿಟಲ್ ಮೌಲ್ಯಮಾಪನವನ್ನು ಕೈಬಿಡಬೇಕು ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

ಕುಲಪತಿ ಹಾಗೂ ರಿಜಿಸ್ಟ್ರಾರ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಸಮಸ್ಯೆ ಬಗೆಹರಿಸದೇ ಇದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಸರ್ಕಾರಕ್ಕೆ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಆಧಾರ್ ಹಿಡಿದು ಹೋದವರು ಮರಳಿ ಬರಲೇ ಇಲ್ಲ – ಬೆಂಗಳೂರು ಪಿಯುಸಿ ವಿದ್ಯಾರ್ಥಿನಿಯರ ಕೇಸ್ ಈಗ ಸಿಐಡಿಗೆ

Share This Article