ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಾಮೆಂಟ್‌; 5 ಸೋಷಿಯಲ್‌ ಮೀಡಿಯಾ ಪೇಜ್‌ಗಳ ವಿರುದ್ಧ FIR

Public TV
1 Min Read

ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ವಿರುದ್ಧ ಅಸಭ್ಯವಾಗಿ ಕಾಮೆಂಟ್ ಮಾಡಿದ್ದ ಐದು ಸೋಷಿಯಲ್‌ ಮೀಡಿಯಾ ಪೇಜ್‌ಗಳ ವಿರುದ್ಧ (ಯೂಟ್ಯೂಬ್‌ನಲ್ಲಿ ಪ್ರಸಾರವಾಗಿದ್ದ ಕಾರ್ಯಕ್ರಮಕ್ಕೆ ಎಕ್ಸ್‌ ಪೇಜ್‌ಗಳಲ್ಲಿ ಕೆಟ್ಟದಾಗಿ ಕಾಮೆಂಟ್ಸ್‌ ಮಾಡಿದವರ ವಿರುದ್ಧ) ಎಫ್‌ಐಆರ್ (FIR) ದಾಖಲಾಗಿದೆ.

ವಿಜಯಲಕ್ಷ್ಮಿ ಬಗ್ಗೆ ಯೂಟ್ಯೂಬ್ ಚಾನೆಲ್‌ವೊಂದು ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದ ವಿಡಿಯೋಗೆ ಕೆಲವರು ವಿಜಯಲಕ್ಷ್ಮಿ ಬಗ್ಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದರು. ಈ ಸಂಬಂಧ ವ್ಯಕ್ತಿಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು.ಇದನ್ನೂ ಓದಿ: ಚೌಕಿದಾರ್ ಸಿನಿಮಾದ `ಓ ಮೈ ಬ್ರೋ’ ಹಾಡಿಗೆ ಭರ್ಜರಿ ರೆಸ್ಪಾನ್ಸ್

ದೂರಿನ ಆಧಾರದ ಮೇಲೆ ಮಹಿಳಾ ಆಯೋಗವು ಪೊಲೀಸ್ ಕಮೀಷನರ್‌ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು. ದೂರು ಪರಿಶೀಲನೆ ನಡೆಸಿದ ಸಿಕೆ ಅಚ್ಚುಕಟ್ಟು ಪೊಲೀಸರು BNS ಸೆಕ್ಷನ್ 75, 79 ಹಾಗೂ ಐಟಿ ಆ್ಯಕ್ಟ್ 67, 66 ಅಡಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಸದ್ಯ ಐದು ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.ಇದನ್ನೂ ಓದಿ: ಕಿರುತೆರೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ

Share This Article