ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್ ಎಫೆಕ್ಟ್ – ಬೆಂಗಳೂರಿಗೆ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ

Public TV
1 Min Read

ಬೆಂಗಳೂರು: ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್ ಪರಿಣಾಮವಾಗಿ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇದೆ.

ಬಿಸಿಲಿನ ಬೇಗೆ ಮಧ್ಯೆ ಮಳೆಯ ಮುನ್ಸೂಚನೆ ಸಿಕ್ಕಿದೆ. ಇಂದು ರಾಜಧಾನಿ ಸೇರಿ ರಾಜ್ಯದ ಹಲವೆಡೆ ಮಳೆ ಮನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಿಗೆ ಮಳೆ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ವಿಜಯಪುರ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದಿನಿಂದ ಏಪ್ರಿಲ್ 4 ವರೆಗೆ ಮಳೆ ಮುನ್ಸೂಚನೆ ನೀಡಲಾಗಿದೆ.

Share This Article