ಭುವನೇಶ್ವರ: ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳದ (Sexual Harassment) ದೂರಿನ ಬಗ್ಗೆ ಕ್ರಮ ಕೈಗೊಳ್ಳದ ಕಾರಣ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಒಡಿಶಾದ (Odisha) ಬಾಲಸೋರ್ (Balasore) ಕಾಲೇಜು ವಿದ್ಯಾರ್ಥಿನಿ (Student) ಮೂರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ಸೋಮವಾರ ತಡರಾತ್ರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.
ಬಾಲಸೋರ್‌ನ ಫಕೀರ್ ಮೋಹನ್ ಸ್ವಾಯತ್ತ ಕಾಲೇಜಿನ ಬಿ.ಎಡ್ ವಿದ್ಯಾರ್ಥಿನಿ ಜುಲೈ 1ರಂದು ತನ್ನ ವಿಭಾಗದ ಮುಖ್ಯಸ್ಥ ಹಾಗೂ ಪ್ರೊಫೆಸರ್ ಸಮೀರ್ ಕುಮಾರ್ ಸಾಹು ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಳು. ಕಾಲೇಜಿನ ಆಂತರಿಕ ದೂರು ಸಮಿತಿಗೆ ಬರೆದ ಪತ್ರದಲ್ಲಿ ಪ್ರೊಫೆಸರ್‌ನಿಂದ ತಿಂಗಳುಗಳ ಕಾಲ ಲೈಂಗಿಕ ಕಿರುಕುಳ ಮತ್ತು ಬೆದರಿಕೆಗಳ ಕುರಿತು ವಿವರಿಸಿದ್ದಳು. ಏಳು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಪ್ರೊಫೆಸರ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದನ್ನೂ ಓದಿ: ಮೈಸೂರಿನಲ್ಲಿ ಸಿದ್ದು ಶಕ್ತಿ ಪ್ರದರ್ಶನಕ್ಕೆ ಸಜ್ಜು – 1 ಬಸ್ಸಿಗೆ 6 ಸಾವಿರ ಕೊಡುತ್ತಿದ್ದಾರೆ ಕೈ ನಾಯಕರು
ಜುಲೈ 12ರಂದು ವಿದ್ಯಾರ್ಥಿನಿ ತನ್ನ ಸಹಪಾಠಿಗಳು ಹಾಗೂ ಇತರೆ ವಿದ್ಯಾರ್ಥಿಗಳೊಂದಿಗೆ ಕಾಲೇಜು ಗೇಟ್ ಹೊರಗೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಲೈಂಗಿಕ ಕಿರುಕುಳ ಅನುಭವಿಸಿದ್ದ ವಿದ್ಯಾರ್ಥಿನಿ ಇದ್ದಕ್ಕಿದ್ದಂತೆ ಎದ್ದು ಪ್ರೊಫೆಸರ್ ಕಚೇರಿಯ ಬಳಿ ಓಡಿಹೋಗಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಘಟನೆಯಲ್ಲಿ ಅವಳ ದೇಹ 90% ಸುಟ್ಟು ಹೋಗಿತ್ತು. ತಕ್ಷಣವೇ ಆಕೆಯನ್ನು ಭುವನೇಶ್ವರದ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಇಂದು ಹುಟ್ಟೂರಿನಲ್ಲಿ ತಾಯಿಯ ಸಮಾಧಿ ಬಳಿಯೇ ಸರೋಜಾದೇವಿ ಅಂತ್ಯಸಂಸ್ಕಾರ
ವಿದ್ಯಾರ್ಥಿನಿಯ ಸಾವಿಗೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ತಪ್ಪಿತಸ್ಥರೆಲ್ಲರಿಗೂ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ವಿದ್ಯಾರ್ಥಿನಿಯ ಕುಟುಂಬಕ್ಕೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕಾರ್ಕಳ ಪರಶುರಾಮನ ಮೂರ್ತಿ ಕಂಚು, ಫೈಬರಿನದ್ದಲ್ಲ, ಹಿತ್ತಾಳೆಯದ್ದು – ಕೋರ್ಟ್‌ಗೆ ಪೊಲೀಸರ ಚಾರ್ಜ್‌ಶೀಟ್
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಎಫ್‌ಎಂ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿನಿಯ ನಿಧನದ ಸುದ್ದಿ ಕೇಳಿ ನನಗೆ ತುಂಬಾ ದುಃಖವಾಗಿದೆ. ವೈದ್ಯರ ನಿರಂತರ ಶ್ರಮದ ಬಳಿಕವೂ ಸಂತ್ರಸ್ತೆಯ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ಆಕೆಯ ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಮತ್ತು ಭಗವಂತ ಜಗನ್ನಾಥನಲ್ಲಿ ಆಕೆಯ ಕುಟುಂಬಕ್ಕೆ ಈ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಕೇಳಿಕೊಳ್ಳುತ್ತೇನೆ. ಈ ಪ್ರಕರಣದಲ್ಲಿ ತಪ್ಪಿತಸ್ಥರೆಲ್ಲರೂ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯನ್ನು ಎದುರಿಸುತ್ತಾರೆ ಎಂದು ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ನಾನು ಭರವಸೆ ನೀಡುತ್ತೇನೆ. ಇದಕ್ಕಾಗಿ ನಾನು ಅಧಿಕಾರಿಗಳಿಗೆ ವೈಯಕ್ತಿಕವಾಗಿ ಸೂಚನೆಗಳನ್ನು ನೀಡಿದ್ದೇನೆ. ಸರ್ಕಾರವು ಕುಟುಂಬದೊಂದಿಗೆ ನಿಲ್ಲುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಟೆಕ್ಕಿ ಗಿರೀಶ್ ಹತ್ಯೆ ಕೇಸ್ – ಶುಭಾಗೆ ಕ್ಷಮಾದಾನ ಅವಕಾಶ ನೀಡಿದ ಸುಪ್ರೀಂ