ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ಹುಚ್ಚು ನಾಯಿಗಳ ಹಾವಳಿ ವಿಪರೀತವಾಗಿದ್ದು, ಮಕ್ಕಳು, ಯುವಕರು, ವಯೋವೃದ್ಧರು ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಮೇಲೆ ದಾಳಿ ನಡೆಸಿವೆ. ಹುಚ್ಚು ನಾಯಿಗಳ ದಾಳಿಗೆ ಒಳಗಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಓಲ್ಡ್ ಸಿಟಿಯಲ್ಲಿ ಮಕ್ಕಳು, ಯುವಕರು ಹಾಗೂ ವಯೋವೃದ್ಧರು ಸೇರಿದಂತೆ 15ಕ್ಕೂ ಜನಕ್ಕೆ ಹುಚ್ಚು ನಾಯಿಗಳು ಕಡಿದು ಗಂಭೀರ ಗಾಯಗಳಾಗಿವೆ. ಮಕ್ಕಳು, ಯುವಕರು ಹಾಗೂ ವಯೋವೃದ್ಧರು ಸೇರಿದಂತೆ 15ಕ್ಕೂ ಗಾಯಾಳುಗಳು ಬ್ರೀಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮಗಳನ್ನು ಕೊಂದು, ಆತ್ಮಹತ್ಯೆಗೆ ಶರಣಾದ ತಂದೆ
ರಾತ್ರಿ, ಹಗಲು ಎನ್ನದೇ ಮಕ್ಕಳು, ಯುವಕರು, ಮಹಿಳೆಯರು ಹಾಗೂ ವಯೋವೃದ್ಧರ ಮೇಲೆ ಹುಚ್ಚು ನಾಯಿಗಳು ದಾಳಿ ಮಾಡುತ್ತಿವೆ. ಹುಚ್ಚು ನಾಯಿಗಳ ಹಾವಳಿಯನ್ನು ನಿಯಂತ್ರಿಸುವಲ್ಲಿ ನಗರಸಭೆಯ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹರ್ಷ ಕೊಲೆ ಕೇಸ್ ತನಿಖೆ ಪೂರ್ಣಗೊಳಿಸಿ ಆರೋಪಿಗಳನ್ನು ಎನ್‍ಕೌಂಟರ್ ಮಾಡಿ: ಮುತಾಲಿಕ್

 
			
 
		 
		 
                                
                              
		