16ನೇ ಜನಗಣತಿಗೆ ಇಂದು ಕೇಂದ್ರದಿಂದ ಅಧಿಕೃತ ಅಧಿಸೂಚನೆ ಸಾಧ್ಯತೆ

Public TV
1 Min Read

ನವದೆಹಲಿ: ದೇಶದಲ್ಲಿ ಜನಗಣತಿ (Census) ನಡೆಸುವ ವಿಚಾರವಾಗಿ ಇಂದು ಕೇಂದ್ರ ಸರ್ಕಾರ (Central Government) ಅಧಿಕೃತ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಭಾನುವಾರ (ಜೂ.15) ಸಭೆ ನಡೆದಿತ್ತು. ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ, ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರು ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಈ ಸಭೆ ನಡೆದ ಹಿನ್ನೆಲೆ ಇಂದು ಅಧಿಕೃತ ಅಧಿಸೂಚನೆ ಪ್ರಕಟಿಸುವ ಸಾಧ್ಯತೆಯಿದೆ.ಇದನ್ನೂ ಓದಿ: ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿಗೆ ಬ್ರೇಕ್ – ರಸ್ತೆಗಿಳಿದ್ರೆ ಬೈಕ್ ಸೀಜ್

ಮೊದಲ ಬಾರಿಗೆ ಜನಗಣತಿಯಲ್ಲಿ ಜಾತಿಗಣತಿ (Caste Census) ಸೇರಿಸಲಾಗಿದ್ದು, ಈ ಬಾರಿ 34 ಲಕ್ಷ ಗಣತಿದಾರರು, ಮೇಲ್ವಿಚಾರಕರು ಮತ್ತು ಜನಗಣತಿ ಕಾರ್ಯಕರ್ತರು ಸೇರಿ ಸುಮಾರು 1.3 ಲಕ್ಷ ಜನರಿದ್ದಾರೆ. ಜೊತೆಗೆ ಜನಗಣತಿ ವೇಳೆ ಅತ್ಯಾಧುನಿಕ ಮೊಬೈಲ್ ಡಿಜಿಟಲ್ ಗ್ಯಾಜೆಟ್‌ಗಳನ್ನು ಬಳಸಲಿದ್ದಾರೆ.

ಸದ್ಯ ಮೊದಲ ಹಂತದಲ್ಲಿ ಮನೆ ಪಟ್ಟಿ ಕಾರ್ಯಾಚರಣೆ ನಡೆಯುತ್ತಿದೆ. ಈ ಮೂಲಕ ವಸತಿ ಪರಿಸ್ಥಿತಿಗಳು, ಮನೆಯ ಆಸ್ತಿಗಳು ಮತ್ತು ಸೌಕರ್ಯಗಳಿಗೆ ಸಂಬಂಧಿಸಿದ ಡೇಟಾವನ್ನು ಸಂಗ್ರಹಿಸಲಾಗುತ್ತದೆ. ಅದಾದ ಬಳಿಕ ಎರಡನೇ ಹಂತದಲ್ಲಿ ಜನಸಂಖ್ಯಾ ಗಣತಿ, ಮನೆಯಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯ ಬಗ್ಗೆ ಮಾಹಿತಿ ಹಾಗೂ ಸಾಮಾಜಿಕ-ಆರ್ಥಿಕ, ಸಾಂಸ್ಕೃತಿಕ ಮತ್ತು ಇತರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.ಇದನ್ನೂ ಓದಿ:ಮುಂದುವರಿದ ಮಳೆ ಆರ್ಭಟ – ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಅಲರ್ಟ್

Share This Article