Breaking: ಅಧಿಕೃತವಾಗಿ ‘ಕೆಜಿಎಫ್ 3’ ಘೋಷಣೆ ಮಾಡಿದ ಹೊಂಬಾಳೆ ಫಿಲ್ಮ್ಸ್

Public TV
1 Min Read

ಲಾರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯ ಜೊತೆಗೆ ಮತ್ತೊಂದು ಮಹತ್ವದ ಸುದ್ದಿಯನ್ನೂ ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ ನೀಡಿದೆ. ಮುಂದಿನ ದಿನಗಳಲ್ಲಿ ಕೆಜಿಎಫ್ 3 (KGF 3) ಸಿನಿಮಾವನ್ನೂ ನಿರ್ಮಾಣ ಮಾಡುವುದಾಗಿ ಅದು ತಿಳಿಸಿದೆ. ಸಲಾರ್ ಸಿನಿಮಾದ ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯವನ್ನು ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಬರೆದುಕೊಂಡಿದೆ.

ಕೆಜಿಎಫ್ 3 ಸಿನಿಮಾ ಮುಂಬರುವ ದಿನಗಳಲ್ಲಿ ಬರಲಿದೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಆದರೆ, ಅಧಿಕೃತವಾಗಿ ಯಾರೂ ಅದನ್ನು ಹೇಳುವ ಪ್ರಯತ್ನ ಮಾಡಿರಲಿಲ್ಲ. ಸಲಾರ್ ನಂತರವೇ ಈ ಚಿತ್ರವನ್ನು ಪ್ರಶಾಂತ್ ನೀಲ್ ಕೈಗೆತ್ತಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕೆ ಸುಳಿವು ಎನ್ನುವಂತೆ ಕೆಜಿಎಫ್ 3 ಚಿತ್ರದ ಬಗ್ಗೆ ನಿರ್ಮಾಣ ಸಂಸ್ಥೆ ಪ್ರಸ್ತಾಪಿಸಿದೆ. ಇದನ್ನೂ ಓದಿ:ರಜನಿಕಾಂತ್ ವಿರುದ್ಧ ಮತ್ತೆ ಗುಡುಗಿದ ವಾಟಾಳ್ ನಾಗರಾಜ್

ಪ್ರಶಾಂತ್ ನೀಲ್ (Prashant Neel) ಮತ್ತು ಯಶ್ (Yash) ಕಾಂಬಿನೇಷನ್ ನ ಕೆಜಿಎಫ್ ಸಿನಿಮಾ ವಿಶ್ವಮಟ್ಟದಲ್ಲಿ ಸದ್ದು ಮಾಡಿತು. ಕನ್ನಡ ಸಿನಿಮಾವೊಂದು ಆ ಪ್ರಮಾಣದಲ್ಲಿ ದುಡ್ಡು ಮಾಡಲು ಸಾಧ್ಯವಾ ಎನ್ನುವ ಅಚ್ಚರಿಯನ್ನೂ ಮೂಡಿತ್ತು. ಕೆಜಿಎಫ್ 1 ಮತ್ತು 2 ಎರಡೂ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಬಿರುಗಾಳಿ ಎಬ್ಬಿಸಿದ್ದವು. ಹಾಗಾಗಿ ಮುಂದಿನ ದಿನಗಳಲ್ಲಿ ಈ ಸರಣಿ ಮುಂದುವರೆಯಲಿದೆ ಎನ್ನುವ ಸುಳಿವೂ ಕೂಡ ಇತ್ತು.

 

ಇದೀಗ ಪ್ರಶಾಂತ್ ನೀಲ್ ಸಲಾರ್ ಮುಗಿಸಿಕೊಂಡು, ಜ್ಯೂನಿಯರ್ ಎನ್.ಟಿ.ಆರ್ ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. ಯಶ್ ಹೊಸ ಸಿನಿಮಾದ ಕೆಲಸದಲ್ಲಿ ಬ್ಯೂಸಿಯಾಗಿದ್ದಾರೆ. ಹಾಗಾಗಿ ಕೆಜಿಎಫ್ 3 ಸಿನಿಮಾ ಯಾವಾಗ ಸೆಟ್ಟೇರಲಿದೆ ಎನ್ನುವ ಕುತೂಹಲ ಎಲ್ಲರಿಗೂ ಮೂಡಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್