ನೆಲಮಂಗಲ: ಹೊತ್ತಿ ಉರಿದ ಗೋದಾಮು – 30 ಕೋಟಿ ಮೌಲ್ಯದ ಆಯಿಲ್‌ ಬೆಂಕಿಗಾಹುತಿ

Public TV
1 Min Read

* ಭಾರತ-ಪಾಕ್‌ ನಡುವಿನ ಸಂಘರ್ಷ ಹಿನ್ನೆಲೆ ಹೆಚ್ಚಿನ ಆಯಿಲ್‌ ಸಂಗ್ರಹಿಸಿದ್ದ ಕಂಪನಿ

ನೆಲಮಂಗಲ: ಶಾರ್ಟ್‌ ಸರ್ಕ್ಯೂಟ್‌ನಿಂದ ಆಯಿಲ್‌ ಗೋದಾಮು ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಘಟನೆ ನಡೆದಿದೆ.

ಶೆಲ್‌ ಕಂಪನಿಗೆ ಸೇರಿದ ಆಯಿಲ್‌ ಗೋದಾಮು ಧಗಧಗನೆ ಹೊತ್ತಿ ಉರಿದಿದೆ. ಬೆಳಗಿನ ಜಾವ ಮೂರು ಗಂಟೆಯಲ್ಲಿ ಈ ಅವಘಡ ಸಂಭವಿಸಿದೆ. ನೆಲಮಂಗಲ, ಪೀಣ್ಯಾ, ಯಶವಂತಪುರ ಭಾಗದ 8 ಕ್ಕೂ ಹೆಚ್ಚು ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಇದನ್ನೂ ಓದಿ: ರಜೆಯಲ್ಲಿದ್ದ ಯೋಧ ಮರಳಿ ಗಡಿಯತ್ತ – ಬೀಳ್ಕೊಟ್ಟ ಗುಬ್ಬಿ ನಾಗರಿಕರು

ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಕಿಯ ನರ್ತನ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ಅಕ್ಕದ ಗೋದಾಮು ಮನೆಗೆ ಬೆಂಕಿ ತಗುಲುವ ಆತಂಕ ಎದುರಾಗಿದೆ. ಸರಿಸುಮಾರು 30 ಕೋಟಿ ರೂಪಾಯಿ ಮೌಲ್ಯದ ಆಯಿಲ್ ಬೆಂಕಿಗಾಹುತಿ ಆಗಿರಬಹುದು ಎನ್ನಲಾಗಿದೆ. 40 ಸಾವಿರ ಅಡಿಯಲ್ಲಿನ ಗೋದಾಮು ಸಂಪೂರ್ಣವಾಗಿ ಬೆಂಕಿಯಿಂದ ನಾಶವಾಗಿದೆ.

ಭಾರತ-ಪಾಕಿಸ್ತಾನ ನಡುವಿನ ಯುದ್ಧ ಆರಂಭ ಹಿನ್ನೆಲೆ ಹೆಚ್ಚಿನ ಸ್ಟಾಕ್ ಶೇಖರಣೆ ಮಾಡಲಾಗಿತ್ತು. ಯುದ್ಧದ ಪರಿಣಾಮವಾಗಿ ಕಂಪನಿ ಸಾಕಷ್ಟು ಪ್ರಮಾಣದಲ್ಲಿ ಆಯಿಲ್ ಶೇಖರಣೆ ಮಾಡಿತ್ತು. ರಾಜ್ಯದಲ್ಲಿ ಯಾವುದೇ ಆಯಿಲ್ ಸಮಸ್ಯೆ ಬಾರದಂತೆ ಸಂಗ್ರಹಣೆ ಮಾಡಲಾಗಿತ್ತು. ಆದರೆ, ಬೆಂಕಿ ಅವಘಡದಿಂದ ಆಯಿಲ್‌ ನಷ್ಟವಾಗಿದೆ. ಇದನ್ನೂ ಓದಿ: ಹಾವೇರಿ | ಬಿರುಗಾಳಿ ಸಹಿತ ಮಳೆ – ಸಿಡಿಲಬ್ಬರಕ್ಕೆ ಇಬ್ಬರು ಬಲಿ

ಕಂದಾಯ ಮಾಜಿ ಸಚಿವ ಹೆಚ್.ಸಿ.ಶ್ರೀಕಂಠಯ್ಯ ಅಳಿಯ ಕೃಷ್ಣಪ್ಪ ಎಂಬವರಿಗೆ ಸೇರಿದ ಗೋದಾಮು ಇದು. ಇದನ್ನು ಶೆಲ್ ಕಂಪನಿಗೆ ಬಾಡಿಗೆಗೆ ನೀಡಲಾಗಿತ್ತು.

Share This Article