ಮಾನಸಿಕ ಅಸ್ವಸ್ಥನಿಗೆ ಲಾಠಿಯಿಂದ ಹೊಡೆದು ಕಾಲಿನಿಂದ ತುಳಿದ ಪೊಲೀಸಪ್ಪ!

Public TV
1 Min Read

ಮಂಗಳೂರು: ಮಾನಸಿಕ ಅಸ್ವಸ್ಥ ವೃದ್ಧನ ಜೊತೆ ಪೊಲೀಸ್ ಪೇದೆಯೊಬ್ಬ ಅಮಾನವೀಯವಾಗಿ ವರ್ತಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಕಡಬ ಜಾತ್ರೆಯ ಪ್ರಯುಕ್ತ ದೇವರ ಮೆರವಣಿಗೆ ಕಡಬ ಪೇಟೆಯ ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥ ವೃದ್ಧ, ಯಾರಿಗೋ ಬೈಯುತ್ತ ಕೈಯಲ್ಲಿ ಕಲ್ಲು ಹಿಡಿದುಕೊಂದಿದ್ದ ಎನ್ನುವ ಕಾರಣಕ್ಕೆ ಆತನನ್ನು ಪೇದೆ ಪಂಪಾಪತಿ ಲಾಠಿಯಿಂದ ಹೊಡೆದು ಬಿರು ಬಿಸಿಲಿನಲ್ಲಿ ನೆಲಕ್ಕೆ ಕೆಡವಿ ಕಾಲಿನಿಂದ ತುಳಿದಿದ್ದಾರೆ.

ಈ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ ಪೊಲೀಸಪ್ಪನ ಈ ಕೃತ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ವೃದ್ಧನ ಮೇಲೆ ಕ್ರೌರ್ಯ ಮೆರೆದ ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಪಂಪಾಪತಿ ವಿರುದ್ಧ ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *