ಹರಿಯುವ ನೀರಿನಲ್ಲಿ ಕೊಚ್ಚಿ ಹೋದ ವಯೋ ವೃದ್ಧ

Public TV
1 Min Read

ದಾವಣಗೆರೆ: ವಯೋ ವೃದ್ಧರೊಬ್ಬರು ಚೆಕ್ ಡ್ಯಾಂ ದಾಟುತ್ತಿದ್ದ ವೇಳೆ ಹರಿಯುವ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.

60 ವರ್ಷದ ಬಸಪ್ಪ ನೀರಿನಲ್ಲಿ ಕೊಚ್ಚಿ ಹೋದ ವಯೋವೃದ್ಧ. ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಹಳ್ಳ-ಕೊಳಗಳು ತುಂಬಿ ಹರಿಯುತ್ತಿವೆ. ಶುಕ್ರವಾರ ಮಧ್ಯಾಹ್ನ ಸುಮಾರು ಮೂರು ಗಂಟೆ ವೇಳೆ ಬಸಪ್ಪವರು ಚೆಕ್ ಡ್ಯಾಂ ಮೇಲೆ ಬರುತ್ತಿರುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಲಕ್ಷ್ಮೀ ಸಾಗರ ಗ್ರಾಮಕ್ಕೆ ಬರಲು ಪರ್ಯಾಯ ಮಾರ್ಗವಿಲ್ಲದ ಕಾರಣ ಗ್ರಾಮಸ್ಥರು ಚೆಕ್ ಡ್ಯಾಂ ಬಳಸಬೇಕಿದೆ. ಈ ಸಂಬಂಧ ಗ್ರಾಮಕ್ಕೆ ಸೇತುವೆ ನಿರ್ಮಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಿಫಲವಾಗಿದ್ದಾರೆ. ತಾಲೂಕು ಆಡಳಿತದ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬಸಪ್ಪರ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇತ್ತ ಬಸಪ್ಪ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Share This Article
Leave a Comment

Leave a Reply

Your email address will not be published. Required fields are marked *