ಶಿವಮೊಗ್ಗದಲ್ಲಿ ಝಿಕಾ ವೈರಸ್‍ಗೆ ಮೊದಲ ಬಲಿ

Public TV
0 Min Read

ಶಿವಮೊಗ್ಗ: ಝಿಕಾ ವೈರಸ್ (Zika Virus) ಸೋಂಕಿನಿಂದ 74 ವರ್ಷದ ವೃದ್ಧರೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ (Shivamogga) ಗಾಂಧಿನಗರದಲ್ಲಿ ನಡೆದಿದೆ.

ಜೂ. 19 ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ.21 ರಂದು ನಡೆಸಿದ್ದ ರಕ್ತ ಪರೀಕ್ಷೆಯಲ್ಲಿ ಝಿಕಾ ವೈರಸ್ ಪತ್ತೆ ಆಗಿತ್ತು. ಬಳಿಕ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಕುಟುಂಬಸ್ಥರು ಗುರುವಾರ ಅವರನ್ನು ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಹೋಗಿದ್ದರು. ತೀವ್ರ ಆರೋಗ್ಯ ಸಮಸ್ಯೆಯಿಂದ ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ಜ್ವರ ಮಾತ್ರವಲ್ಲದೇ ಬೇರೆ ಕಾಯಿಲೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

Share This Article