ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟುಗಳ ವಿರುದ್ಧ FIR; ದೇಶದಲ್ಲಿ ಸರ್ವಾಧಿಕಾರ ಆರಂಭವಾಯ್ತಾ – ಸಾಕ್ಷಿ ಮಲಿಕ್‌ ಪ್ರಶ್ನೆ

Public TV
2 Min Read

ನವದೆಹಲಿ: ಭಾರತೀಯ ಕುಸ್ತಿ ಫಡೆರೇಶನ್‌ ಮುಖ್ಯಸ್ಥ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ವಿರುದ್ಧ ಲೈಂಗಿಕ ಆರೋಪ ಹೊರಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ವಿರುದ್ಧ ದೆಹಲಿ ಪೊಲೀಸರು (Delhi Police) ಕೇಸ್‌ ದಾಖಲಿಸಿದ್ದಾರೆ.

ಒಲಿಂಪಿಕ್‌ ಪದಕ ವಿಜೇತರಾದ ಬಜರಂಗ್‌ ಪೂನಿಯಾ (Bajrang Punia), ವಿನೇಶ್‌ ಫೋಗಟ್‌, ಸಂಗೀತಾ ಫೋಗಟ್‌ ಹಾಗೂ ಸಾಕ್ಷಿ ಮಲಿಕ್‌ (Sakshi Malik) ಸೇರಿದಂತೆ ಹಲವರ ವಿರುದ್ಧ IPC ಸೆಕ್ಷನ್ 147, 149, 186, 188, 332, 353 PDPP ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಕೇಸ್‌ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನದ ಸರ ನುಂಗಿದ- ಗಂಟಲಲ್ಲಿ ಸಿಲುಕಿ ಆಸ್ಪತ್ರೆಯಲ್ಲಿ ನರಳಾಡಿದ!

ಕ್ರೀಡಾಪಟುಗಳ ವಿರುದ್ಧ ಎಫ್‌ಐಆರ್‌ ದಾಖಲಾದ ನಂತರ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬ್ರಿಜ್‌ ಭೂಷಣ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ದೆಹಲಿ ಪೊಲೀಸರಿಗೆ 7 ದಿನಗಳ ಬೇಕಾಯಿತು. ಆದ್ರೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ನಮ್ಮ ವಿರುದ್ಧ ಕೇಸ್‌ ದಾಖಲಿಸಲು 7 ಗಂಟೆಯೂ ಬೇಕಾಗಲಿಲ್ಲ. ಈ ದೇಶದಲ್ಲಿ ಸರ್ವಾಧಿಕಾರ ಆರಂಭವಾಗಿದೆಯೇ? ತನ್ನ ದೇಶದ ಕ್ರೀಡಾಪಟುಗಳನ್ನು ಹೇಗೆ ನಡೆಸಿಕೊಳ್ಳುತ್ತಿದೆ ಎಂಬುದನ್ನ ಕ್ರೀಡಾ ಜಗತ್ತೇ ನೋಡುತ್ತಿದೆ ಎಂದು ಸಾಕ್ಷಿ ಮಲಿಕ್‌ ಟ್ವೀಟ್‌ ಮೂಲಕ ಕಿಡಿ ಕಾರಿದ್ದಾರೆ.

ಭಾನುವಾರ ಹೊಸ ಸಂಸತ್‌ ಭವನದ ಎದುರು ಪ್ರತಿಭಟನೆ ನಡೆಸಲು ಮೆರವಣಿಗೆ ಹೊರಟಿದ್ದ ಸಂದರ್ಭದಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಅಲ್ಲದೆ ಕುಸ್ತಿಪಟುಗಳ ಮೇಲೆ ಹಲ್ಲೆ ನಡೆಸಿದರು. ಬಳಿಕ ಸಂಜೆ ವೇಳೆಗೆ ಅವರನ್ನು ಬಿಡುಗಡೆಗೊಳಿಸಲಾಯಿತು. ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ದೌರ್ಜನ್ಯ – ದೆಹಲಿ ಪೊಲೀಸರ ನಡೆಗೆ ವ್ಯಾಪಕ ಖಂಡನೆ

ವ್ಯಾಪಕ ಖಂಡನೆ:
ಕುಸ್ತಿಪಟುಗಳ ಮೇಲೆ ಪೊಲೀಸರ ದೌರ್ಜನ್ಯವನ್ನು ರಾಷ್ಟ್ರೀಯ ನಾಯಕರು ಖಂಡಿಸಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ನಾಯಕರು ಖಂಡಿಸಿದ್ದು, ಬ್ರಿಜ್‌ ಭೂಷಣ್‌ ಬಂಧಿಸುವಂತೆ ಆಗ್ರಹಿಸಿದ್ದಾರೆ.

Share This Article