ಮೈಸೂರಿನಲ್ಲಿ ಓಮಿಕ್ರಾನ್ ಮೊದಲ ಪ್ರಕರಣ ಪತ್ತೆ – 9 ವರ್ಷದ ಬಾಲಕಿಗೆ ಸೋಂಕು

Public TV
1 Min Read

ಮೈಸೂರು: ವಿಶ್ವದಲ್ಲಿ ಮೂರನೇ ಅಲೆಯ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್‍ನ ಹೊಸ ರೂಪಾಂತರಿ ಓಮಿಕ್ರಾನ್ ಮೈಸೂರಿಗೂ ಕಾಲಿಟ್ಟಿದ್ದು, ವಿದೇಶದಿಂದ ಬಂದಿದ್ದ ಬಾಲಕಿಯಲ್ಲಿ ಪತ್ತೆಯಾಗಿದೆ.

ಕೊರೊನಾದಿಂದ ತತ್ತರಿಸಿದ್ದ ಮೈಸೂರು ಈಗತಾನೇ ಚೇತರಿಸಿಕೊಳ್ಳುತ್ತಿದೆ. ಆದರೆ ಈಗ ಅರಮನೆ ನಗರಿಯಲ್ಲಿ ಓಮಿಕ್ರಾನ್ ಆತಂಕ ಶುರುವಾಗಿದೆ. ವಿದೇಶದಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಓಮಿಕ್ರಾನ್ ದೃಢವಾಗಿತ್ತು. ಬಾಲಕಿಯು ಸ್ವಿಜರ್ಲೆಂಡ್‍ನಿಂದ ಮೈಸೂರಿಗೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಬಾಲಕಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ ಪಾಸಿಟಿವ್ ಬಂದಿದ್ದರಿಂದ, ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್‍ಗೆ ಕಳುಹಿಸಲಾಗಿತ್ತು. ಬಾಲಕಿಗೆ ಓಮಿಕ್ರಾನ್ ಇರುವುದು ಪತ್ತೆಯಾಗಿದೆ. ಇದನ್ನೂ ಓದಿ: ಹೈಡ್ರಾಮಾ ಮಾಡುತ್ತಿದ್ದ ಅಜ್ಜಿಗೆ ಒತ್ತಾಯ ಪೂರ್ವಕವಾಗಿ ಲಸಿಕೆ ನೀಡಿದ ಆಶಾ ಕಾರ್ಯಕರ್ತೆಯರು

ಸದ್ಯಕ್ಕೆ ಬಾಲಕಿಗೆ ಸೋಂಕಿನ ಯಾವುದೇ ರೋಗಲಕ್ಷಣ ಕಂಡುಬಂದಿಲ್ಲ. ಬಾಲಕಿಯನ್ನು ಪ್ರತ್ಯೇಕವಾಗಿ ಇರಿಸಲಾಗಿದ್ದು, ಪ್ರಾಥಮಿಕ, ದ್ವಿತೀಯ ಸಂಪರ್ಕಿತರ ತಪಾಸಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ಬೊಮ್ಮಾಯಿ ನಾಯಕತ್ವದಲ್ಲೇ 2023ರ ಚುನಾವಣೆ: ವಿ.ಸೋಮಣ್ಣ

Share This Article
Leave a Comment

Leave a Reply

Your email address will not be published. Required fields are marked *