ವಿದೇಶದಿಂದ ಬೆಂಗಳೂರಿಗೆ ಬಂದ 9 ಮಂದಿಗೆ ಕೊರೊನಾ

Public TV
1 Min Read

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಕೊರೊನಾ ಸ್ಫೋಟಗೊಂಡಿದೆ. ವಿದೇಶದಿಂದ ಬಂದ 9 ಮಂದಿ ಪ್ರಯಾಣಿಕರಿಗೆ ಪಾಸಿಟಿವ್‌ ಬಂದಿದೆ.

ಇಂದು ಬೆಳಗ್ಗಿನ  ಜಾವ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 9 ಮಂದಿಯಲ್ಲಿ ಸೋಂಕು ಕಾಣಿಸಿದೆ. ಇಂಗ್ಲೆಂಡ್‌ 5, ಅಮೆರಿಕ 2, ಘಾನಾ 1, ಸ್ಕಾಟ್‌ಲ್ಯಾಂಡ್‌ನಿಂದ ಬಂದ ಒಬ್ಬರಿಗೆ ಕೊರೊನಾ ಬಂದಿದೆ. ಇದನ್ನೂ ಓದಿ: ಓಮಿಕ್ರಾನ್ ಸೋಂಕಿತ ಹೃದಯಾಘಾತದಿಂದ ಸಾವು

ಎಲ್ಲರ ಗಂಟಲ ದ್ರವದ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಕಳುಹಿಸಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ಮೂಲಗಳು ತಿಳಿಸಿವೆ.

​ಬಿಬಿಎಂಪಿ ವ್ಯಾಪ್ತಿಯಲ್ಲಿ 20 ರಿಂದ 50 ವರ್ಷದೊಳಗಿರುವವರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಬಾಧಿತರಾಗುತ್ತಿದ್ದಾರೆ. ವಿದೇಶಗಳಿಂದ ಬರುತ್ತಿರುವ ಪ್ರಯಾಣಿಕರ ಪೈಕಿ ಹೆಚ್ಚಿನ ಮಂದಿಯಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇದನ್ನೂ ಓದಿ: ಕೋವಿಡ್‌ ಲಸಿಕೆಯ 4ನೇ ಬೂಸ್ಟರ್‌ ಡೋಸ್‌ಗೆ ಇಸ್ರೇಲ್‌ ಅನುಮೋದನೆ

ಗುರುವಾರ ಕರ್ನಾಟಕದಲ್ಲಿ 566 ಹೊಸ ಪ್ರಕರಣ ಪತ್ತೆಯಾಗಿತ್ತು. ಜೊತೆಗೆ ಓಮಿಕ್ರಾನ್ ಒಟ್ಟು ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆಯಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *