ಫ್ಲೋರಿಡಾದಲ್ಲಿ 2 ದೋಣಿಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, 12 ಮಂದಿಗೆ ಗಾಯ

By
1 Min Read

ವಾಷಿಂಗ್ಟನ್: ಅಮೆರಿಕದ (America) ಫ್ಲೋರಿಡಾದಲ್ಲಿ (Florida) 2 ದೋಣಿಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಕ್ಲಿಯರ್‌ವಾಟರ್ ನಗರದ ಮೆಮೋರಿಯಲ್ ಕಾಸ್‌ವೇ ಸೇತುವೆಯ ಬಳಿ ನಡೆದಿದೆ.

ಇಬ್ಬರು ಸಿಬ್ಬಂದಿ ಸೇರಿದಂತೆ 45 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಗೆ ಇನ್ನೊಂದು ದೋಣಿಯು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಇನ್ನೊಂದು ದೋಣಿಯು ಘಟನಾ ಸ್ಥಳದಿಂದ ಕಾಣೆಯಾಗಿದೆ ಎಂದು ಕ್ಲಿಯರ್‌ವಾಟರ್ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ‘ಥಾಮಾ’ ಚಿತ್ರಕ್ಕಾಗಿ ಊಟಿಯಲ್ಲಿ ಬೀಡುಬಿಟ್ಟ ರಶ್ಮಿಕಾ ಮಂದಣ್ಣ

ಮೂಲಗಳ ಪ್ರಕಾರ, ರಾತ್ರಿ 10 ಗಂಟೆ ಸುಮಾರಿಗೆ 2 ದೋಣಿಗಳು ಮುಖಾಮುಖಿ ಡಿಕ್ಕಿ ಹೊಡೆದ ನಂತರ ಸೇತುವೆಯ ದಕ್ಷಿಣ ದಡದಲ್ಲಿ ಬಂದು ನಿಂತಿತು. ಆ ಕೂಡಲೇ ಗಾಯಾಳುಗಳನ್ನು ಹೊರತೆಗೆಯಲಾಯಿತು ಎಂದು ತಿಳಿಸಿದೆ. ಇದನ್ನೂ ಓದಿ: ಪೊಲೀಸರು ಇವರ ಗುಲಾಮರು ಅಂದುಕೊಂಡಿದ್ದಾರಾ? – ಸಿಎಂ ನಡೆಗೆ ಛಲವಾದಿ ನಾರಾಯಣಸ್ವಾಮಿ ಕಿಡಿ

ಈ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೇಕೇರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಡಿಕ್ಕಿ ಹೊಡೆದು ಪರಾರಿಯಾದ ಮತ್ತೊಂದು ದೋಣಿಯ ಬಗ್ಗೆ ಮಾಹಿತಿ ದೊರೆತಿಲ್ಲ. ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share This Article