ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಬೊಲೆರೋಗೆ ಟೆಂಪೋ ಡಿಕ್ಕಿ- ಓರ್ವನ ದುರ್ಮರಣ

Public TV
1 Min Read

ಚಿಕ್ಕಬಳ್ಳಾಪುರ: ಬೊಲೆರೋ ಗೂಡ್ಸ್ ವಾಹನ ಹಾಗೂ 407 ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಆಂಧ್ರದ ಧರ್ಮಾವರಂ ಮೂಲದ ಲಿಂಗಮಯ್ಯ(45) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಶ್ರೀನಿವಾಸಲು ಹಾಗೂ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 7ರ ಬೀಚಗಾನಹಳ್ಳಿ ಕ್ರಾಸ್ ಬಳಿ ಈ ಘಟನೆ ಸಂಭವಿಸಿದ್ದು, ಚಾಲಕನ ನಿಯಂಯತ್ರಣ ತಪ್ಪಿದ ಬೊಲೆರೋ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆವಿದೇ ವೇಳೆ ಹಿಂಬದಿಯಿಂದ ಬರುತ್ತಿದ್ದ 407 ಟೆಂಪೋ ಕೂಡ ಬೊಲೆರೋ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *