ಎರಡು ಬೈಕ್‍ಗಳಿಗೆ ಹಿಂಬದಿಯಿಂದ ಕಾರ್ ಡಿಕ್ಕಿ – ಓರ್ವ ಸಾವು, ಮೂವರು ಗಂಭೀರ

Public TV
1 Min Read

ಮಂಡ್ಯ: ಯುಗಾದಿ ಹಬ್ಬದಂದೇ ಬೆಳ್ಳಂಬೆಳಗ್ಗೆ ಎರಡು ಬೈಕ್‍ಗಳಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಚಿನ ಕೋಟೆ ಗೇಟ್ ಬಳಿ ನಡೆದಿದೆ.

ತಮ್ಮಯ್ಯ (45) ಮೃತ ದುರ್ದೈವಿ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಎನ್‍ಎಚ್ 75 ರಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಹಬ್ಬಕ್ಕೆ ಬೈಕ್‍ನಲ್ಲಿ ಊರಿಗೆ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ತಿಮ್ಮಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅಪಘಾತಕ್ಕೆ ಟೋಲ್‍ನ ಲಂಕೋ ಕಂಪೆನಿಯ ನಿರ್ಲಕ್ಷ್ಯವೇ ಕಾರಣವಾಗಿದ್ದು, ಕಳೆದ ಒಂದು ವರ್ಷದಿಂದ ಸೇತುವೆ ಕೆಲಸ ಮುಗಿಸದೆ ಕಾಮಗಾರಿ ನಡೆಯುತ್ತಿರುವುದರಿಂದ ಪದೇ ಪದೇ ಇಲ್ಲಿ ಅಪಘಾತ ಸಂಭವಿಸುತ್ತಿವೆ. ಸುಂಕ ಕಟ್ಟಿಸಿಕೊಂಡು ಸೇತುವೆ ಕಾರ್ಯ ಮುಗಿಸದ ಟೋಲ್ ಕಂಪೆನಿಯ ವಿರುದ್ಧ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ.

ಈ ಘಟನೆ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಬಳಿಕ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಸದ್ಯಕ್ಕೆ ಕಾರನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *