ಕಾಂಗ್ರೆಸ್ ಸಂಸದೆ ಸರ ಕಳವು ಪ್ರಕರಣ – ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸ್

Public TV
1 Min Read

ನವದೆಹಲಿ: ವಾಕಿಂಗ್ ಹೋಗಿದ್ದ ಕಾಂಗ್ರೆಸ್ (Congress) ಸಂಸದೆ ಸುಧಾ ರಾಮಕೃಷ್ಣನ್ (Sudha Ramakrishnan) ಅವರ ಸರ ದೋಚಿ ಪರಾರಿಯಾಗಿದ್ದ ಕಳ್ಳರನ್ನು ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.

ಆಗಸ್ಟ್ 4ರಂದು ತಮಿಳುನಾಡಿನ ಮೈಲಾಡುತುರೈನ ಸಂಸದೆ ಸುಧಾ ಅವರು ಚಾಣಕ್ಯಪುರಿಯ ಪೋಲೆಂಡ್ ರಾಯಭಾರ ಕಚೇರಿಯ ಬಳಿ ಡಿಎಂಕೆ ಶಾಸಕಿ ರಾಜತಿ ಅವರ ಜೊತೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಸ್ಕೂಟರ್‌ನಲ್ಲಿ ಬಂದ ಹೆಲ್ಮೆಟ್ ಧರಿಸಿದ್ದ ವ್ಯಕ್ತಿ ಸುಧಾ ಅವರ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದ. ಇದನ್ನೂ ಓದಿ: ಡಿಕೆಶಿ ಶ್ರಮ, ಹೋರಾಟಕ್ಕೆ ಪ್ರತಿಫಲ ಸಿಗಬೇಕು: ಇಕ್ಬಾಲ್ ಹುಸೇನ್

ಈ ಸಂಬಂಧ ದೆಹಲಿ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರವನ್ನು ಸಹ ಬರೆದಿದ್ದರು. ಇದೀಗ ಪೊಲೀಸರು ಖದೀಮನನ್ನು ಬಂಧಿಸಿದ್ದು, ಆತನಿಂದ ಚಿನ್ನದ ಸರವನ್ನೂ ವಶಕ್ಕೆ ಪಡೆಯಲಾಗಿದೆ. ಆರೋಪಿಯು ಓಖ್ಲಾ ನಿವಾಸಿಯೆಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article