ಪಶ್ಚಿಮ ಬಂಗಾಳ | ಶಾಲೆಯ ಬಳಿಯೇ ಬಾಂಬ್‌ ಸ್ಫೋಟ – ಓರ್ವ ಸಾವು

Public TV
1 Min Read

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ (West Bengal) ಶಾಲೆಯೊಂದರ (School) ಬಳಿಯೇ ಬಾಂಬ್‌ ಸ್ಫೋಟಗೊಂಡು (Bomb Blast) ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್ ಪ್ರೌಢಶಾಲೆಯ ಬಳಿ ಸೋಮವಾರ (ಆ.18) ಮುಂಜಾನೆ ಈ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಬರಾಸತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರತೀಕ್ಷಾ ಜಾರ್ಖರಿಯಾ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್‌ ಬೆದರಿಕೆ – ತೀವ್ರ ಶೋಧ

ಬಾಂಬ್‌ ಸ್ಫೋಟಗೊಂಡ ಸ್ಥಳಕ್ಕೆ ಪಶ್ಚಿಮ ಬಂಗಾಳ ಸರ್ಕಾರದ ಆಹಾರ ಮತ್ತು ಸರಬರಾಜು ಸಚಿವ ರತಿನ್ ಘೋಷ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸಾವನ್ನಪ್ಪಿದ ವ್ಯಕ್ತಿ ಬೇರೆ ರಾಜ್ಯದ ನಿವಾಸಿಯಾಗಿದ್ದಾನೆ. ಸ್ಫೋಟ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೈಸೂರು | ಕುಡಿತಕ್ಕೆ ಹಣ ನೀಡದ ಪತ್ನಿಯನ್ನ ಕೊಂದೇಬಿಟ್ಟ ಪತಿ

Share This Article