ಆಪರೇಷನ್ ಕಮಲ ಫೇಲ್ ಬೆನ್ನಲ್ಲೆ ಬಿಜೆಪಿಗೆ ಮತ್ತೊಂದು ಶಾಕ್!

Public TV
2 Min Read

ಬೆಂಗಳೂರು: ಆಪರೇಷನ್ ಕಮಲ ಬಹುತೇಕ ಫೇಲ್ ಆದ ಬೆನ್ನಲ್ಲೇ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಮಂಗಳವಾರ ಮಧ್ಯಾಹ್ನ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದ ಶಾಸಕ ಆರ್.ಶಂಕರ್ ಇದೂವರೆಗೂ ರಾಜ್ಯಪಾಲರನ್ನು ಭೇಟಿ ಮಾಡಿಲ್ಲ. ಇಂದು ಬೆಂಬಲ ವಾಪಸ್ ಪಡೆದಿದ್ದರ ಬಗ್ಗೆ ಪತ್ರವನ್ನು ನೀಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯನವರ ಒಂದು ಫೋನ್ ಕರೆಯಿಂದಾಗಿ ಆರ್.ಶಂಕರ್ ಮನಸ್ಸು ಬದಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಂಪುಟದಿಂದ ಕೊಕ್ ನೀಡಿದ ಹಿನ್ನೆಲೆಯಲ್ಲಿ ಆರ್.ಶಂಕರ್ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು. ಮಂಗಳವಾರ ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಬೆಂಬಲ ಹಿಂಪಡೆದಿದ್ದೇನೆ ಅಂತ ಹೇಳಿದ್ದರು. ಪಕ್ಷೇತರರು ಇಬ್ಬರು ಬೆಂಬಲ ವಾಪಾಸ್ಸು ಪಡೆದ ಬಳಿಕ ಮುಂಬೈನಲ್ಲಿರುವ ಕಾಂಗ್ರೆಸ್‍ನ ಕೆಲ ಅತೃಪ್ತ ಶಾಸಕರು ಇಂದು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದನ್ನೂ ಓದಿ: ಮೂರು ದಿನದಿಂದ ಸ್ವಿಚ್ ಆಫ್ ಮಾಡಿದ್ದೆ- ಕೊನೆಗೂ ಪಬ್ಲಿಕ್ ಟಿವಿಗೆ ತನ್ನ ನಿರ್ಧಾರ ತಿಳಿಸಿದ್ರು ಭೀಮಾನಾಯ್ಕ್

ಇದೀಗ ಮಾಜಿ ಸಿಎಂ ಸಿದ್ದರಾಮಯ್ಯನವರು ಆರ್.ಶಂಕರ್ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ. ಮತ್ತೊಮ್ಮೆ ನಿಮಗೆ ಸಂಪುಟದಲ್ಲಿ ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರಂತೆ. ಈ ಹಿಂದೆ ಸಚಿವರಾಗಿದ್ದ ಆರ್.ಶಂಕರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗದ ಹಿನ್ನೆಲೆಯಲ್ಲಿ ಸಂಪುಟದಿಂದ ಕೊಕ್ ನೀಡಲಾಗಿತ್ತು ಎಂದು ಹೇಳಲಾಗಿತ್ತು. ಆದ್ರೆ ಇದೂವರೆಗೂ ಆರ್.ಶಂಕರ್ ಈ ಬಗ್ಗೆ ಅಧಿಕೃತ ಹೇಳಿಕೆಯನ್ನ ನೀಡಿಲ್ಲ. ಇದನ್ನೂ ಓದಿಸರ್ಕಾರ ಉರುಳಿಸುವ ಹಂತಕ್ಕೆ ಬಂತಾ ಇಬ್ಬರ ವೈಯಕ್ತಿಕ ಪ್ರತಿಷ್ಠೆ!

ತುಮಕೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ಸಮ್ಮಿಶ್ರ ಸರ್ಕಾರ ಸ್ಥಿರವಾಗಿದೆ. ನಮ್ಮ 38 ಶಾಸಕರು ಯಾವುದೇ ಆಪರೇಷನ್ ಕಮಲಕ್ಕೆ ಒಳಗಾಗಲ್ಲ. ಇನ್ನು ಕಾಂಗ್ರೆಸ್ ಶಾಸಕರ ಬಗ್ಗೆ ಅವರನ್ನೇ ಕೇಳಬೇಕು ಎಂದು ಹೇಳಿದರು. ಇದನ್ನೂ ಓದಿಬಿಜೆಪಿಯ ಆಪರೇಷನ್ ಕಮಲ ಬಹುತೇಕ ಫೇಲ್?

ಮುಂಬೈನಲ್ಲಿದ್ದಾರೆಂದು ಹೇಳಲಾಗುತ್ತಿದ್ದ ಶಾಸಕ ಭೀಮಾನಾಯ್ಕ್ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಇನ್ನುಳಿದ ಶಾಸಕರು ಶೀಘ್ರದಲ್ಲಿಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮುಂಬೈನಲ್ಲಿ ಈಗ 3-4 ಶಾಸಕರು ಇದ್ದು, ಶಾಸಕ ಉಮೇಶ್ ಜಾಧವ್ ಕೂಡ ಉಲ್ಟಾ ಹೊಡೆಯುವ ಸಾಧ್ಯತೆಯಿದೆ. ಉಮೇಶ್ ಜಾಧವ್ ವಾಪಸ್ ಬಗ್ಗೆ ಸಹೋದರ ರಾಮಚಂದ್ರ ಜಾಧವ್ ಸುಳಿವು ನೀಡಿದ್ದಾರೆ. ರಮೇಶ್ ಜಾರಕಿಹೊಳಿ, ಮಹೇಶ್ ಕಮಟಳ್ಳಿ ನಡೆ ಮಾತ್ರ ನಿಗೂಢವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *