ನವದೆಹಲಿ: ಹಣ ಹೂಡಿಕೆ ಮಾಡಿ ಆಡುವ ಆನ್‌ಲೈನ್ ಗೇಮ್‌ಗಳನ್ನು (Online Gaming) ಕೇಂದ್ರ ಸರ್ಕಾರ (Central Govt) ನಿಷೇಧಿಸಿದ ಬೆನ್ನಲ್ಲೇ ಮನಿ ಗೇಮಿಂಗ್ ಸಂಸ್ಥೆಯಾಗಿರುವ ಡ್ರೀಮ್11 (Dream11) ಬಿಸಿಸಿಐ (BCCI) ಪ್ರಾಯೋಜಕತ್ವದಿಂದ ಹಿಂದೆ ಸರಿದಿದೆ.
ಈ ಕುರಿತು ಡ್ರೀಮ್11 ಬಿಸಿಸಿಐಗೆ ಮಾಹಿತಿ ನೀಡಿದ್ದು, ಇನ್ನು ಮುಂದೆ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಾಯೋಜಕತ್ವ ವಹಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಸೆ.9ರಿಂದ ಆರಂಭವಾಗಲಿರುವ ಏಷ್ಯಾಕಪ್‌ಗೆ ಬೇರೆ ಹೊಸ ಪ್ರಾಯೋಜಕರ ಅವಶ್ಯತತೆಯಿದೆ.ಇದನ್ನೂ ಓದಿ: ಏನಿದು ಗೌರಿ ಹಬ್ಬ? ಆಚರಣೆ ಹೇಗೆ?
18 ವರ್ಷಗಳ ಹಿಂದೆ ಆರಂಭವಾಗಿದ್ದ ಡ್ರೀಮ್11 ಸಂಸ್ಥೆ 2023ರ ಜುಲೈನಲ್ಲಿ ಬಿಸಿಸಿಐ ಪ್ರಾಯೋಜಕತ್ವವನ್ನು 3 ವರ್ಷದ ಅವಧಿಗೆ ಬರೋಬ್ಬರಿ 358 ಕೋಟಿ ರೂ.ಗೆ ಪಡೆದುಕೊಂಡಿತ್ತು. ಒಪ್ಪಂದದ ಅವಧಿ ಮುಂಬರುವ 2026ರ ಜುಲೈ ತಿಂಗಳವರೆಗೆ ಇದ್ದರೂ ಕೂಡ 1 ವರ್ಷಕ್ಕೂ ಮುಂಚೆ ಸಂಸ್ಥೆ ಪ್ರಾಯೋಜಕತ್ವವನ್ನು ತೊರೆದಿದೆ.
ಇನ್ನೂ ಇದು ಕಾನೂನು ವಿಚಾರಕ್ಕೆ ಒಳಪಟ್ಟಿರುವುದರಿಂದ ಡ್ರೀಮ್11 ಸಂಸ್ಥೆ ಅವಧಿಗೂ ಮುನ್ನ ಪ್ರಾಯೋಜತ್ವವನ್ನು ತೊರೆದಿದ್ದರೂ ಕೂಡ ಬಿಸಿಸಿಐ ಯಾವುದೇ ದಂಡ ಪಾವತಿಸಿಕೊಳ್ಳುತ್ತಿಲ್ಲ. ಸಾಮಾನ್ಯವಾಗಿ ಯಾವುದೇ ಸಂಸ್ಥೆಯು ಅವಧಿಗೆ ಮುನ್ನ ಪ್ರಾಯೋಜಕತ್ವ ತೊರೆದರೆ ಭಾರೀ ದಂಡ ಪಾವತಿಸಬೇಕಾಗುತ್ತದೆ.
ಈ ಕುರಿತು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ಬಗ್ಗೆ ಮಾತನಾಡಿ, ಆನ್‌ಲೈನ್ ಗೇಮಿಂಗ್ ಮಸೂದೆಯ ನಂತರ ಬಿಸಿಸಿಐ ಮತ್ತು ಡ್ರೀಮ್11 ಪರಸ್ಪರ ಸಂಬಂಧವನ್ನು ಸ್ಥಗಿತಗೊಳಿಸುತ್ತಿದ್ದು, ಭವಿಷ್ಯದಲ್ಲಿ ಈ ರೀತಿಯ ಯಾವುದೇ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ, ಇದನ್ನೂ ಓದಿ: ಮೋದಕ ಅಷ್ಟೇ ಅಲ್ಲ ಈ ಸಿಹಿ ತಿಂಡಿಗಳೂ ವಿನಾಯಕನಿಗೆ ತುಂಬಾ ಇಷ್ಟ!