ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿರುವ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್ ಡ್ಯಾಂ (KRS Dam) ಭರ್ತಿಗೆ ಕೇವಲ 7 ಅಡಿಗಳಷ್ಟೇ ಬಾಕಿಯಿದೆ.
ಜಲಾಶಯಕ್ಕೆ 23,473 ಕ್ಯೂಸೆಕ್ ಒಳಹರಿವು ಇದ್ದು, ನಿನ್ನೆಗಿಂತ ಇಂದು ಒಳಹರಿವಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ಸದ್ಯ ಡ್ಯಾಂನಲ್ಲಿ 39.847 ಟಿಎಂಸಿ ನೀರು ಸಂಗ್ರಹವಾಗಿದ್ದು, 1,252 ಕ್ಯೂಸೆಕ್ ಒಳಹರಿವು ಇದೆ.ಇದನ್ನೂ ಓದಿ: Air India Crash | 215 ಡಿಎನ್‌ಎ ಮ್ಯಾಚ್ – 198 ಮೃತದೇಹ ಹಸ್ತಾಂತರ
124.80 ಅಡಿಗಳ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ 117.80 ಅಡಿ ನೀರಿದ್ದು, ಸಂಪೂರ್ಣ ಭರ್ತಿಗೆ 7 ಅಡಿಗಳಷ್ಟೇ ಬಾಕಿಯಿದೆ. ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಡ್ಯಾಂ ಭರ್ತಿಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸಿದೆ.
ಹಾರಂಗಿ ಜಲಾಶಯ 2849.77 ಅಡಿ ಭರ್ತಿ
2,859 ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಹಾರಂಗಿ ಜಲಾಶಯದಲ್ಲಿ 2849.77 ಅಡಿ ನೀರಿದೆ. ಜಲಾಶಯಕ್ಕೆ ಸದ್ಯ 3,070 ಕ್ಯೂಸೆಕ್ ನೀರಿನ ಒಳಹರಿವಿದ್ದು, 3,070 ಕ್ಯುಸೆಕ್ ಹೊರಹರಿವಿದೆ.
ಹೇಮಾವತಿಗೆ 13,273 ಕ್ಯೂಸೆಕ್ ಒಳಹರಿವು
ಇನ್ನೂ 37.103 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ ಜಲಾಶಯದಲ್ಲಿ 29.350 ಟಿಎಂಸಿ ನೀರಿದೆ. 2,922 ಅಡಿ ಗರಿಷ್ಠ ಮಟ್ಟದ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಇಂದು 2,913.40 ಅಡಿ ನೀರಿದೆ. ಇಂದು 13,273 ಕ್ಯುಸೆಕ್ ಒಳಹರಿವಿದ್ದು, 4,750 ಕ್ಯೂಸೆಕ್ ಹೊರಹರಿವಿದೆ.ಇದನ್ನೂ ಓದಿ: ದೊಡ್ಡಣ್ಣನ ಎಂಟ್ರಿಯಿಂದ 3ನೇ ಮಹಾಯುದ್ಧದ ಆತಂಕ – ಇರಾನ್ ಬೆಂಬಲಕ್ಕೆ ನಿಂತ ರಷ್ಯಾ