ತಿರುಪತಿ ದೇವಸ್ಥಾನದಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು: ಸಿಎಂ ಚಂದ್ರಬಾಬು ನಾಯ್ಡು

Public TV
1 Min Read

– ಎಲ್ಲಾ ರಾಜ್ಯಗಳ ರಾಜಧಾನಿಯಲ್ಲಿ ತಿರುಪತಿ ದೇವಸ್ಥಾನ ನಿರ್ಮಾಣಕ್ಕೆ ಪ್ಲ್ಯಾನ್‌

ಹೈದರಾಬಾದ್‌: ತಿರುಮಲ ತಿರುಪತಿ ದೇವಸ್ಥಾನದಲ್ಲಿ (TTD) ಹಿಂದೂಗಳು ಮಾತ್ರ ಕೆಲಸ ಮಾಡಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು (Chandrababu Naidu) ಹೇಳಿದ್ದಾರೆ.

ತಮ್ಮ ಮೊಮ್ಮಗ ದೇವಾಂಶ್ ಹುಟ್ಟುಹಬ್ಬದ ಪ್ರಯುಕ್ತ ಸಿಎಂ ನಾಯ್ಡು ಅವರಿಂದು ತಿರುಮಲ ತಿರುಪತಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದರು. ಈ ವೇಳೆ ಆಡಳಿತ ಮಂಡಳಿ ಸದಸ್ಯರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ತಿರುಮಲ ದೇವಸ್ಥಾನದಲ್ಲಿ ಹಿಂದೂಗಳು (Hindus) ಮಾತ್ರ ಕೆಲಸ ಮಾಡಬೇಕು. ಒಂದು ವೇಳೆ ಕ್ರೈಸ್ತರು, ಇತರ ಧರ್ಮದ ಜನ ಕೆಲಸ ಮಾಡುತ್ತಿದ್ದರೆ, ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಗೌರವಯುತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.

ಇದೇ ವೇಳೆ ದೇಶದಾದ್ಯಂತ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ವೆಂಕಟೇಶ್ವರ ಸ್ವಾಮಿ ದೇವಾಲಯಗಳನ್ನು ನಿರ್ಮಿಸುವ ಯೋಜನೆ ಇದೆ ಎಂದು ಪ್ರಕಟಿಸಿದರು. ದೇವಾಲಯಗಳ ನಿರ್ಮಾಣಕ್ಕೆ ಸಹಕಾರ ನೀಡುವಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ಸಿಎಂ ನಾಯ್ಡು ಘೋಷಿಸಿದರು. ಇದನ್ನೂ ಓದಿ: ರಾಷ್ಟ್ರಗೀತೆ ಗಾಯನದ ವೇಳೆ ನಿತೀಶ್ ಕುಮಾರ್ ಮಾತುಕತೆ – ಬಿಹಾರ ಅಸೆಂಬ್ಲಿಯಲ್ಲಿ ಗದ್ದಲ, ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಒತ್ತಾಯ

ಜೊತೆಗೆ ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಎಂಆರ್‌ಕೆಆರ್‌ ಮತ್ತು ಮುಮ್ತಾಜ್‌ ಹೊಟೇಲ್‌ ನಿರ್ಮಾಣ ಮಾಡುವ ʻದೇವಲೋಕಂʼ ಯೋಜನೆಗಳಿಗೆ 35 ಎಕರೆ ಜಮೀನು ಮಂಜೂರು ಮಾಡಿರುವುದನ್ನು ರದ್ದುಪಡಿಸುವುದಾಗಿಯೂ ಘೋಷಿಸಿದರು. ಇದನ್ನೂ ಓದಿ: 19ರ ಯುವತಿಗೆ 42ರ ಅಂಕಲ್‌ನಿಂದ ಲವ್‌ ಟಾರ್ಚರ್‌ – ಪಿನಾಯಿಲ್ ಕುಡಿದು ವಿದ್ಯಾರ್ಥಿನಿ ಆತ್ಮಹತ್ಯೆ

ಕೆಲ ಹಿಂದೂ ಧಾರ್ಮಿಕ ಮುಖಂಡರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು, ಟಿಡಿಪಿ ನೇತೃತ್ವದ ಸಮ್ಮಿಶ್ರ ಸರ್ಕಾರವು ಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಹೋಟೆಲ್‌ಗಳ ನಿರ್ಮಾಣ ಮಾಡುವುದು ಹಾಗೂ ಇತರ ಚಟುವಟಿಕೆಗಳನ್ನು ಕೈಗೊಂಡಿದೆ. ಇದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು ಈ ಹಿನ್ನೆಲೆ ಸರ್ಕಾರ ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.

Share This Article