Operation Ajay- ಇಸ್ರೇಲಿನಿಂದ 9 ಮಂದಿ ಕನ್ನಡಿಗರು ದೆಹಲಿಗೆ ಆಗಮನ

Public TV
1 Min Read

ನವದೆಹಲಿ: ಯುದ್ಧಪೀಡಿತ ಇಸ್ರೇಲ್‍ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆಸಿಕೊಳ್ಳುವ ಆಪರೇಷನ್ ಅಜಯ್ (Operation Ajay) ಕಾರ್ಯಾಚರಣೆ ಮುಂದುವರಿದಿದ್ದು, ಇಂದು 235 ಮಂದಿ ಪ್ರಯಾಣಿಕರು ವಾಪಸ್ಸಾಗಿದ್ದಾರೆ.

ಹೌದು. ಆಪರೇಷನ್ ಅಜಯ್ ಕಾರ್ಯಚರಣೆಯ ಮೂಲಕ ಇಸ್ರೇಲ್ ನಿಂದ (Isreal) ಎರಡನೇ ವಿಮಾನ ಇಂದು ಭಾರತಕ್ಕೆ ಬಂದಿಳಿದಿದೆ. ಎರಡನೇ ವಿಮಾನದಲ್ಲಿ 235 ಮಂದಿ ಪ್ರಯಾಣಿಕರು ಆಗಮಿಸಿದ್ದು, ಇದರಲ್ಲಿ ಒಂಬತ್ತು ಮಂದಿ ಕನ್ನಡಿಗರು (ಮೈಸೂರು ಐವರು, ಬೆಂಗಳೂರಿನ ಬಸವನಗುಡಿಯ ನಾಲ್ಕು ಮಂದಿ ನಿವಾಸಿಗಳು) ದೆಹಲಿಗೆ ಬಂದಿಳಿಯುವ ಮೂಲಕ ನಿಟ್ಟುಸಿರುಬಿಟ್ಟಿದ್ದಾರೆ. ದೆಹಲಿಗೆ ಆಗಮಿಸಿದ ಪ್ರಯಾಣಿಕರನ್ನು ಕೇಂದ್ರ ಸಚಿವ ರಾಜಕುಮಾರ ರಾಜನ್ ಸಿಂಗ್ ಸ್ವಾಗತಿಸಿದ್ದಾರೆ. ಇದನ್ನೂ ಓದಿ: Operation Ajay: ಇಸ್ರೇಲ್‌ನಿಂದ 230 ಮಂದಿ ಭಾರತೀಯರ ಆಗಮನ – ಕನ್ನಡಿಗರಿಗೆ ಟಿ.ಬಿ ಜಯಚಂದ್ರ ಆತ್ಮೀಯ ಸ್ವಾಗತ

ಶುಕ್ರವಾರ ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್‍ನಿಂದ ದಹೆಲಿಗೆ ಬಂದಿಳಿದಿತ್ತು. ಒಟ್ಟು 230 ಮಂದಿ ಭಾರತೀಯರು ತವರಿಗೆ ಮರಳಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಸ್ವಾಗತಿಸಿದ್ದರು. 230 ಮಂದಿಯಲ್ಲಿ ಐವರು ಕನ್ನಡಿಗರು ಸಹ ಇದ್ದು, ಅವರನ್ನ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಆತ್ಮೀಯವಾಗಿ ಬರಮಾಡಿಕೊಂಡಿದ್ದರು. ಇದೇ ವೇಳೆ ದೆಹಲಿಯಿಂದ ಕರ್ನಾಟಕಕ್ಕೆ ತೆರಳಲು ಸಾರಿಗೆ ವೆಚ್ಚದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್