ಚೀನಾ ನಿರ್ಮಿತ ಪಾಕ್‌ನ JF-17 ವಿಮಾನವನ್ನು ಹೊಡೆದು ಹಾಕಿದ ಭಾರತ!

Public TV
1 Min Read

ನವದೆಹಲಿ: ಮಿಡ್‌ನೈಟ್‌ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ JF-17 ಯುದ್ಧ ವಿಮಾನವನ್ನು ಭಾರತ ಹೊಡೆದು ಹಾಕಿದೆ.

ಹೌದು. ಚೀನಾ ನಿರ್ಮಿತ ಜೆಎಫ್‌-17 ಯುದ್ಧ ವಿಮಾನ ಭಾರತದ (India) ದಾಳಿಯನ್ನು ತಡೆಯಲು ಬಂದಿತ್ತು. ಈ ಸಂದರ್ಭದಲ್ಲಿ ಭಾರತ ಕ್ಷಿಪಣಿಯನ್ನು ಹಾರಿಸಿ ಬೀಳಿಸಿದೆ ಎಂದು ವರದಿಯಾಗಿದೆ. ಈ ವಿಚಾರದ ಬಗ್ಗೆ ಇಲ್ಲಿಯವರೆಗೆ ಭಾರತ ಸೇನೆ ಅಧಿಕೃತವಾಗಿ ತಿಳಿಸಿಲ್ಲ.

ಜೆಎಫ್‌ 17 ಚೀನಾ (China) ನಿರ್ಮಿತ ಯುದ್ಧ ವಿಮಾನವಾಗಿದೆ. ಪಾಕಿಸ್ತಾನದ ಬಳಿ 150 ಜೆಎಫ್‌ 17 ವಿಮಾನಗಳಿವೆ. ಈ ಹಿಂದೆ ಅಭಿನಂದನ್‌ ವರ್ಧಮಾನ್‌ ಅವರು ಅಮೆರಿಕದ ಎಫ್‌ 16 ಯುದ್ಧ ವಿಮಾನ ಹೊಡೆದು ಹಾಕಿದ್ದರು.  ಇದನ್ನೂ ಓದಿ: Operation Sindoor | 23 ನಿಮಿಷದ ದಾಳಿಗೆ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್‌

 

2019 ರಲ್ಲಿ ಏನಾಗಿತ್ತು?
2019ರ ಫೆ. 14ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಎಫ್‌ ಯೋಧರಿದ್ದ ಬಸ್ಸಿನ ಮೇಲೆ ಜೈಷ್ ಉಗ್ರನೊಬ್ಬ ಆತ್ಮಾಹುತಿ ದಾಳಿ ನಡೆಸಿದ್ದ. ಈ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ವಾಯು ಪಡೆ ಪಾಕಿಸ್ತಾನದ ಬಾಲಕೋಟ್‍ನಲ್ಲಿ ಜೈಷ್ ಉಗ್ರರ ನೆಲೆಗಳ ಮೇಲೆ ಏರ್ ಸ್ಟ್ರೈಕ್ ನಡೆಸಿ ಉಗ್ರರನ್ನು ಸದೆಬಡೆದಿತ್ತು. ಇದನ್ನೂ ಓದಿ: ನಾವು ಭಾರತದ ಸೈನಿಕರನ್ನು ಸೆರೆ ಹಿಡಿದಿಲ್ಲ: ಬುರುಡೆ ಬಿಟ್ಟು ಸತ್ಯ ಒಪ್ಪಿಕೊಂಡ ಪಾಕ್‌ ಸಚಿವ

ಬಾಲಾಕೋಟ್ ಏರ್ ಸ್ಟ್ರೈಕ್ ನಂತರ ಪಾಕಿಸ್ತಾನ ಫೆ.27 ರಂದು ತನ್ನ ಎಫ್-16 ಯುದ್ಧ ವಿಮಾನದ ಮೂಲಕ ಭಾರತವನ್ನು ಗುರಿಯಾಗಿಸಿಕೊಂಡು ವಾಯು ದಾಳಿ ನಡೆಸಿದ ಸಂದರ್ಭದಲ್ಲಿ ಅಭಿನಂದನ್ ಮಿಗ್-21 ವಿಮಾನದ ಮೂಲಕ ಪಾಕ್ ವಿಮಾನವನ್ನು ಹೊಡೆದುರುಳಿಸಿದ್ದರು. ಈ ವೇಳೆ ಅಭಿನಂದನ್ ಅವರ ಮಿಗ್-21 ವಿಮಾನ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪತನಗೊಂಡಿತ್ತು. ಆಗ ಸುಮಾರು 58 ಗಂಟೆಗಳ ಕಾಲ ಅಭಿನಂದನ್ ಪಾಕಿಸ್ತಾನದ ಕಸ್ಟಡಿಯಲ್ಲೇ ಇದ್ದರು. ನಂತರ ಕೇಂದ್ರ ಸರ್ಕಾರ ಪಾಕ್ ಮೇಲೆ ಒತ್ತಡ ಹೇರಿ ಅಭಿನಂದನ್ ಅವರನ್ನು ಬಿಡಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿತ್ತು.

Share This Article