ವಿರೋಧ ಪಕ್ಷಗಳು ರಾಜ್ಯದ ಮಾನ ತೆಗೆಯುವುದನ್ನು ನಿಲ್ಲಿಸಲಿ: ಡಿಕೆಶಿ

Public TV
1 Min Read

-ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ?

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರಿ ಮಳೆಯನ್ನು ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ. ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ಚಂಡಮಾರುತ ತಡೆಯಲು ಸಾಧ್ಯವೇ? ಇದನ್ನು ಅರ್ಥ ಮಾಡಿಕೊಳ್ಳದ ವಿರೋಧ ಪಕ್ಷಗಳು ರಾಜ್ಯದ ಮಾನ ಹರಾಜು ಹಾಕುವುದನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D K Shivakumar) ತರಾಟೆಗೆ ತೆಗೆದುಕೊಂಡರು.

ಸದಾಶಿವನಗರ ನಿವಾಸದ ಬಳಿ ಬೆಂಗಳೂರಿನ ಮಳೆಯ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಇಂದು (ಬುಧವಾರ) ಕೂಡ ಮಳೆ ಸಾಧ್ಯತೆ ಇದೆ. ಸಂಚಾರ ದಟ್ಟಣೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದರು. ಇದನ್ನೂ ಓದಿ: 14 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ- ಮೂವರು ಸಾವು

ಕಾವೇರಿ (Cauvery) 5ನೇ ಹಂತದ ಕುಡಿಯುವ ನೀರಿನ ಯೋಜನೆ ಕಾರ್ಯಕ್ರಮದಿಂದ ಮರಳಿದ ನಂತರ ಇಂದು ಸಂಜೆ ಪೊಲೀಸ್ ಇಲಾಖೆ, ಬಿಬಿಎಂಪಿ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಮಂಗನ ಕಾಯಿಲೆಗೆ ಲಸಿಕೆ: ಐಸಿಎಂಆರ್ ಮಹಾನಿರ್ದೇಶಕರ ಜೊತೆ ದಿನೇಶ್ ಗುಂಡೂರಾವ್ ಚರ್ಚೆ

ವಿರೋಧ ಪಕ್ಷಗಳ ನಾಯಕರ ಟ್ವೀಟ್‌ಗಳನ್ನು ನೋಡಿದೆ. ಪ್ರಕೃತಿಗೆ ನಾವು ಕಡಿವಾಣ ಹಾಕಿ ಬುದ್ಧಿ ಹೇಳಲು ಸಾಧ್ಯವೇ? ಚಂಡಮಾರುತದ ಪರಿಣಾಮದಿಂದ ಅನಿರೀಕ್ಷಿತವಾಗಿ ಮಳೆ ಸುರಿದಿದ್ದು, ಇನ್ನು ಹೆಚ್ಚಿನ ಮಳೆ ಬಂದರೂ ಅದನ್ನು ನಿಭಾಯಿಸಲು ಸರ್ಕಾರ ಹಾಗೂ ಜನರು ಸಮರ್ಥರಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿಂದ ರಿಲೀಸ್‌

Share This Article