ಧಾರ್ಮಿಕ ಮೆರವಣಿಗೆಗೂ ಮುನ್ನ ಆಯೋಜಕರಿಂದ ಅಫಿಡವಿಟ್ ಕಡ್ಡಾಯ

Public TV
1 Min Read

ಲಕ್ನೋ: ರಾಜ್ಯದಲ್ಲಿ ಯಾವುದೇ ಧಾರ್ಮಿಕ ಮೆರವಣಿಗೆ ನಡೆಸುವ ಮುನ್ನ ಆಯೋಜಕರು ಅಫಿಡವಿಟ್ ಸಲ್ಲಿಸುವುದು ಕಡ್ಡಾಯ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

ನಿನ್ನೆ ತಡರಾತ್ರಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಯೋಗಿ, ಸಭೆ ಬಳಿಕ ಮಹತ್ವದ ನಿರ್ಧಾರ ಘೋಷಿಸಿದ್ದಾರೆ. ರಂಜಾನ್ ಮತ್ತು ಅಕ್ಷಯ ತೃತೀಯ ಹಬ್ಬಗಳು ಒಂದೇ ದಿನ ಬರಲಿದ್ದು, ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ. ದೆಹಲಿಯ ಜಾಹೀಗಿರ್‍ಪುರ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕೋಮು ಘರ್ಷಣೆ ಹೆಚ್ಚಾಗುತ್ತಿದ್ದು, ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಅಪಘಾತವಾದರೆ ರಸ್ತೆ ಅಗೆದವರೆ ಹೊಣೆ – ಬಿಬಿಎಂಪಿಯಿಂದ ಆದೇಶ

ಆಯೋಜಕರಿಗೆ ಧಾರ್ಮಿಕ ಮೆರವಣಿಗೆ ಅವಕಾಶ ನೀಡುವ ಮುನ್ನ ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಳ್ಳುವ ಬಗ್ಗೆ ಅಫಿಡವಿಟ್ ಪಡೆದುಕೊಳ್ಳಬೇಕು. ಹಿಂದಿನಿಂದ ಬಂದಿರುವ ಧಾರ್ಮಿಕ ಮೆರವಣಿಗೆಗಳಿಗೆ ಮಾತ್ರ ಅವಕಾಶ ನೀಡಬೇಕು. ಹೊಸ ಸಂಪ್ರದಾಯ ಅಥವಾ ಆವರಣೆಗಳಿಗೆ ಅನುವು ಮಾಡಿಕೊಡಬಾರದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕನಿಂದ ಕಾಲು ನೆಚ್ಚಿಸಿಕೊಂಡ ಕಿಡಿಗೇಡಿಗಳು – ವೀಡಿಯೋ ವೈರಲ್

ಸೌಹಾರ್ದತೆಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಿ ಮತ್ತು ನಿಗದಿತ ಸ್ಥಳದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಪೂಜೆಗಳು ನಡೆಯುವಂತೆ ನೋಡಿಕೊಳ್ಳಿ ಮತ್ತು ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಿ, ಮುಂದಿನ 24 ಗಂಟೆಯಲ್ಲಿ ಎಲ್ಲ ಪೊಲೀಸ್ ಠಾಣೆಗಳಲ್ಲಿ ಧಾರ್ಮಿಕ ಮುಖಂಡರನ್ನು ಕರೆಸಿ ಶಾಂತಿ ಸಭೆ ನಡೆಸುವಂತೆ ಆದಿತ್ಯನಾಥ್ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *