ಭಾರತದ ಇಬ್ಬರು ಆಟಗಾರರನ್ನು ಹೊರತು ಪಡಿಸಿದರೆ ಉಳಿದವರ ಬಗ್ಗೆ ಪಾಕಿಸ್ತಾನ ತಲೆಕೆಡಿಸಿಕೊಳ್ಳಲ್ಲ: ಹಫೀಜ್

Public TV
1 Min Read

ಇಸ್ಲಾಮಾಬಾದ್: 2022ರ ಟಿ20 ವಿಶ್ವಕಪ್‍ನಲ್ಲಿ ಈಗಾಗಲೇ ಮೊದಲ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಎದುರುಬದುರಾಗಲಿದೆ. ಇದೀಗ ಈ ಬಗ್ಗೆ ಮಾಜಿ ಕ್ರಿಕೆಟಿಗರು ಮಾತನಾಡಲಾರಂಭಿಸಿದ್ದಾರೆ.  ಪಾಕಿಸ್ತಾನ ತಂಡ ಭಾರತದ ಆ ಇಬ್ಬರು ಆಟಗಾರರನ್ನು ಹೊರತು ಪಡಿಸಿದರೆ ಇತರ ಆಟಗಾರರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದು ಪಾಕಿಸ್ತಾನದ ಮಾಜಿ ಆಟಗಾರ ಮೊಹಮ್ಮದ್ ಹಫೀಜ್ ಹೇಳಿಕೆ ನೀಡಿದ್ದಾರೆ.

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ 2022ರ ಟಿ20 ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯಾಟದ ವೇಳಾ ಪಟ್ಟಿಬಿಡುಗಡೆಯಾಗಿದೆ. ಈ ಬಗ್ಗೆ ಮಾಧ್ಯಮವೊಂದರ ಪ್ರಶ್ನೆಗೆ ಉತ್ತರಿಸಿದ ಹಫೀಜ್, ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಾಟದಲ್ಲಿ ಭಾರತದ ತಂಡದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರನ್ನು ಹೊರತು ಪಡಿಸಿದರೆ ಭಾರತ ತಂಡದಲ್ಲಿರುವ ಇತರ ಆಟಗಾರರು ಆ ಒತ್ತಡವನ್ನು ನಿಭಾಯಿಸುತ್ತಾರೆ ಎಂಬ ನಂಬಿಕೆ ಇಲ್ಲ. ಆದರೆ ಇವರಿಬ್ಬರು ಮಾತ್ರ ಅಪಾಯಕಾರಿ ಆಟಗಾರರು ಹಾಗಾಗಿ ಪಾಕಿಸ್ತಾನ ಈ ಇಬ್ಬರ ಬಗ್ಗೆ ಎಚ್ಚರಿಕೆಯ ನಡೆ ಇಡಬೇಕು ಎಂದಿದ್ದಾರೆ. ಇದನ್ನೂ ಓದಿ: 2022ರ ಟಿ20 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ – ಭಾರತಕ್ಕೆ ಮೊದಲ ಎದುರಾಳಿ ಪಾಕ್

ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪಂದ್ಯ ನಡೆದಾಗ ಹೆಚ್ಚಿನ ಒತ್ತಡ ಇರುತ್ತದೆ. ನಾನು ಸಾಕಷ್ಟು ಬಾರಿ ಆಡಿದ್ದೇನೆ ದುಬೈನಲ್ಲಿ 2021ರ ಟಿ20 ವಿಶ್ವಕಪ್‍ನಲ್ಲಿ ನಮ್ಮ ತಂಡ 10 ವಿಕೆಟ್‍ಗಳಿಂದ ಗೆದ್ದಿರುವುದು ಅವಿಸ್ಮರಣೀಯ. ಭಾರತ ಸೂಪರ್‌-12 ಹಂತದಲ್ಲಿ ಸೋತರ, ನಾವು ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತೆವು ಎಂದರು. ಇದನ್ನೂ ಓದಿ: ಅಮೆರಿಕದ ನ್ಯಾಷನಲ್ ಕ್ರಿಕೆಟ್ ಟೀಂನಲ್ಲಿ ಕಾಫಿನಾಡ ಪ್ರತಿಭೆ ನಾಸ್ತೋಶ್ ಕೆಂಜಿಗೆ

Share This Article
Leave a Comment

Leave a Reply

Your email address will not be published. Required fields are marked *