ಶಾಸಕಾಂಗ ಸಭೆಗೆ ಇಬ್ರೂ ಮಾತ್ರ ಬಂದಿಲ್ಲ: ಸಿದ್ದರಾಮಯ್ಯ

Public TV
1 Min Read

-ಶಾಸಕರ ರಕ್ಷಣೆಗಾಗಿ ರೆಸಾರ್ಟ್ ಮೊರೆ ಹೋದ ಮಾಜಿ ಸಿಎಂ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕಾಂಗ್ರೆಸ್ ಶಾಸಕಾಂಗ ಸಭೆ ಕೇವಲ ಅರ್ಧ ಗಂಟೆಯಲ್ಲಿ ಮುಗಿದಿದೆ. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಲ್‍ಪಿ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಸಭೆಯ ವಿವರವನ್ನು ತಿಳಿಸಿದರು.

ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಲ್ಲಿ ಸಮ್ಮಿಶ್ರ ಸರ್ಕಾರ ಬೀಳುತ್ತಾ? ಉಳಿಯುತ್ತಾ? ಎಂಬ ಸುದ್ದಿಗಳು ಪ್ರಸಾರವಾಗುತ್ತಿದೆ. ಬಿಜೆಪಿ ಮಾಧ್ಯಮಗಳಿಗೆ ಸುಳ್ಳು ಮಾಹಿತಿಗಳನ್ನು ನೀಡುತ್ತಿರುವದರಿಂದ ಈ ರೀತಿಯ ಸುದ್ದಿಗಳು ಬಿತ್ತರವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯುವ ಹಿನ್ನೆಲೆಯಲ್ಲಿ ಇಂದು ಶಾಸಕಾಂಗ ಸಭೆ ಕರೆಯಲಾಗಿತ್ತು ಅಂತಾ ಹೇಳಿದರು.

80ರಲ್ಲಿ ಒಟ್ಟು 76 ಶಾಸಕರು ಸಭೆಗೆ ಹಾಜರಾಗಿದ್ದಾರೆ. ಉಮೇಶ್ ಜಾಧವ್ ಆನಾರೋಗ್ಯ ಹಿನ್ನೆಲೆಯಲ್ಲಿ ಸಭೆ ಬಂದಿಲ್ಲ. ಈ ಸಂಬಂಧ ಪತ್ರವನ್ನು ರವಾನಿಸಿದ್ದಾರೆಂದು ಮಾಧ್ಯಮಗಳಿಗೆ ತೋರಿಸಿದರು. ಶಾಸಕ ನಾಗೇಂದ್ರ ಅವರು ಕೋರ್ಟ್ ಕೆಲಸದಲ್ಲಿದ್ದರಿಂದ ಬರೋದಕ್ಕೆ ಆಗಿಲ್ಲ. ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿ ಸಂಪರ್ಕಕ್ಕೆ ಸಿಗುತ್ತಿಲ್ಲ. ಶಾಸಕಾಂಗ ಸಭೆಗೆ ಗೈರಾಗಿರುವ ಶಾಸಕರಿಗೆ ನೋಟಿಸ್ ನೀಡಲಾಗುವುದು ಎಂದ್ರು.

ಸುದ್ದಿಗೋಷ್ಠಿ ಬಳಿಕ ನಾವು ಅಂದ್ರೆ ಎಲ್ಲ ಶಾಸಕರು, ಸಂಸದರು ಮತ್ತು ಪರಿಷತ್ ಸದಸ್ಯರು ಸೇರಿದಂತೆ ಎಲ್ಲರು ಕೆಲವು ದಿನ ಒಟ್ಟಾಗಿ ಇರಲಿದ್ದೇವೆ. ಅಲ್ಲಿ ಒಟ್ಟಾಗಿ ಲೋಕಸಭಾ ಚುಣಾವಣೆ ಸಿದ್ಧತೆಯ ಕುರಿತು ಚರ್ಚೆ ನಡೆಸಲಾಗುವುದು. ನಮ್ಮ ಯಾವ ಶಾಸಕರು ಬಿಜೆಪಿ ಆಮಿಷಗಳಿಗೆ ಬಲಿಯಾಗಲ್ಲ. ಬಿಜೆಪಿಯವರು ನಮ್ಮ ಶಾಸಕರ ಮನೆಯ ಮುಂದೆ ಸೂಟ್‍ಕೇಸ್ ಹಿಡಿದುಕೊಂಡು, ಮಂತ್ರಿ ಮಾಡ್ತೀನಿ ಬಾ ಅಂತ ಕರೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾವೆಲ್ಲ ಒಟ್ಟಾಗಿ ಇರಲಿದ್ದೇವೆ ಎಂದು ಹೇಳುವ ಮೂಲಕ ರೆಸಾರ್ಟ್ ಸೇರಲಿದ್ದೇವೆ ಎಂಬುದನ್ನು ಖಚಿತಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *