Mangaluru| ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಹೊರರಾಜ್ಯದ ಯುವತಿ ಪತ್ತೆ – ಗ್ಯಾಂಗ್ ರೇಪ್ ಯತ್ನ ಶಂಕೆ, ಮೂವರು ಅರೆಸ್ಟ್

By
1 Min Read

ಮಂಗಳೂರು: ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಹೊರರಾಜ್ಯದ ಯುವತಿ (Young Woman) ಪತ್ತೆಯಾಗಿರುವ ಘಟನೆ ಮಂಗಳೂರು (Mangaluru) ಹೊರವಲಯದ ಕಲ್ಲಾಪು (Kallapu) ಬಳಿ ನಡೆದಿದೆ.

ಯುವತಿ ಮೈಮೇಲೆ ಗಾಯದ ಗುರುತು ಇದ್ದು, ಸಾಮೂಹಿಕ ಅತ್ಯಾಚಾರ ಯತ್ನ ಶಂಕೆ ವ್ಯಕ್ತವಾಗಿದೆ. ಉಳ್ಳಾಲ ಠಾಣಾ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಡ್ರಾಪ್ ನೀಡುವ ನೆಪದಲ್ಲಿ ರಿಕ್ಷಾ ಚಾಲಕ ಹಾಗೂ ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ನಡೆಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಿಎಂಟಿಸಿಯನ್ನು ಅಡ್ಡಗಟ್ಟಿದ ಗಜಪಡೆ – ಪ್ರಯಾಣಿಕರು ಶಾಕ್

ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ಕೇರಳದ ಉಪ್ಪಳಕ್ಕೆ ಬಂದಿದ್ದ ಯುವತಿ, ಸ್ನೇಹಿತನ ಜೊತೆ ನಿನ್ನೆ ಮಂಗಳೂರಿಗೆ ಆಗಮಿಸಿದ್ದಳು. ಗಲಾಟೆ ನಡೆದು ಮಧ್ಯರಾತ್ರಿ ಮನೆಯಿಂದ ಒಬ್ಬಳೇ ಹೊರ ಬಂದಿದ್ದಾಳೆ. ಈ ವೇಳೆ ಸಿಕ್ಕ ರಿಕ್ಷಾ ಚಾಲಕನ ಬಳಿ ಸಹಾಯ ಕೇಳಿದ್ದಾಳೆ. ಈ ವೇಳೆ ಆಟೋ ಚಾಲಕ ಹಾಗೂ ಇಬ್ಬರು ಸ್ನೇಹಿತರು ಅಮಲು ಪದಾರ್ಥ ನೀಡಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿರುವ ಅನುಮಾನ ವ್ಯಕ್ತವಾಗಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: Explainer| ಏನಿದು ಪಬ್ಲಿಕ್‌ ಟಿವಿ ವಿದ್ಯಾಪೀಠ? ವಿದ್ಯಾರ್ಥಿಗಳಿಗೆ ಏನು ಲಾಭ? ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

Share This Article