ಚಿಕ್ಕಮಗಳೂರಲ್ಲಿ ನಮೋ Vs ಜೈ ಭೀಮ್ – ನಗರಸಭೆ ಅಧ್ಯಕ್ಷನ ವಿರುದ್ಧ ಆಕ್ರೋಶ

By
1 Min Read

ಚಿಕ್ಕಮಗಳೂರು: ನಗರದ (Chikkamagaluru) ಆಜಾದ್ ಪಾರ್ಕ್ ವೃತ್ತದಲ್ಲಿನ ನಗರಸಭೆ ಕಟ್ಟಡದಲ್ಲಿ ನೂತನವಾಗಿ ನಿರ್ಮಿಸಿರುವ ಜಿಮ್‍ಗೆ ನಮೋ ಎಂದು ನಾಮಕರಣ ಮಾಡಲು ನಗರಸಭೆ ಮುಂದಾಗಿದೆ. ಈ ನಿಲುವನ್ನು ಖಂಡಿಸಿ ನಗರಸಭೆ ವಿರೋಧ ಪಕ್ಷದ ಸದಸ್ಯರು ಹಾಗೂ ಕಾಂಗ್ರೆಸ್ (Congress) ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗುತ್ತಿದ್ದಂತೆ ವಿಪಕ್ಷಗಳ ಸದಸ್ಯರು ಸಭೆಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಜಿಮ್‍ಗೆ ಜೈಭೀಮ್ ವ್ಯಾಯಾಮ ಶಾಲೆ ಎಂದು ನಾಮಕರಣ ಮಾಡಬೇಕೆಂದು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ನಗರಸಭೆ ಅಧ್ಯಕ್ಷರಿಗೆ ಈ ಹಿಂದೆ ಮನವಿ ಸಲ್ಲಿಸಿದ್ದರು. ಆದರೆ ಈಗ ಜಿಮ್‍ಗೆ ನಮೋ ಎಂದು ಹೆಸರಿಡಲು ಮುಂದಾಗಿರುವ ವಿಚಾರವಾಗಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಅರ್ಧ ಬೆಂಗಳೂರಿಗೆ ಇಂದು ನೀರಿನ ಪೂರೈಕೆಯಲ್ಲಿ ವ್ಯತ್ಯಯ

ನಗರಸಭೆಯ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಜೈಭೀಮ್ ಹೆಸರಿಗೆ ಮನ್ನಣೆ ನೀಡದೇ ಏಕಪಕ್ಷೀಯವಾಗಿ ನಮೋ ಜಿಮ್ ನಾಮಕರಣಕ್ಕೆ ನಿರ್ಣಯ ಕೈಗೊಂಡಿದ್ದಾರೆ. ಅವರು ಅಂಬೇಡ್ಕರ್ ವಿರೋಧಿಯಾಗಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಈ ವಿಚಾರವಾಗಿ ನಗರಸಭೆ ಅಧ್ಯಕ್ಷ ಪ್ರತಿಕ್ರಿಯೆ ನೀಡಿದ್ದು, ತುರ್ತು ಸಭೆ ಕರೆದು ಜೈ ಭೀಮ್ ಹೆಸರಿಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಚುನಾವಣಾ ಸಿಬ್ಬಂದಿಗೆ ಬೂತಲ್ಲೇ ಅಂಚೆ ಮತದಾನ ಕಡ್ಡಾಯ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್